ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರದಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ : 248 ಕೇಸ್ ದಾಖಲು!

Police special operation in Shimoga, Bhadravati, Sagar, Shikaripura: 248 cases registered! ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರದಲ್ಲಿ ಪೊಲೀಸರ ವಿಶೇಷ ಗಸ್ತು ಕಾರ್ಯಾಚರಣೆ : 248 ಕೇಸ್ ದಾಖಲು!

ಶಿವಮೊಗ್ಗ, ಡಿ. 8: ಶಿವಮೊಗ್ಗ, ಭದ್ರಾವತಿ, ಸಾಗರ ಹಾಗೂ ಶಿಕಾರಿಪುರದ ವಿವಿಧೆಡೆ ಗುರುವಾರ ಸಂಜೆ ಪೊಲೀಸರು ಏರಿಯಾ ಡಾಮಿನೇಷನ್ ವಿಶೇಷ ಗಸ್ತು ಕಾರ್ಯಾಚರಣೆ ನಡೆಸಿದ್ದಾರೆ.

ಶಿವಮೊಗ್ಗದ ಮಂಜುನಾಥ ಬಡಾವಣೆ, ಎಎ ಕಾಲೋನಿ, ರೈಲ್ವೆ ಸ್ಟೇಷನ್, ಸೋಮಿನಕೊಪ್ಪ, ಭದ್ರಾವತಿಯ ವಿದ್ಯಾ ಕಾಲೋನಿ, ತಮ್ಮಣ್ಣ ಕಾಲೋನಿ, ಸಾಗರದ ರಾಮನಗರ, ಇಕ್ಕೇರಿ ವೃತ್ತ, ಜೋಗ ಬಜಾರ್, ಯಡೇಹಳ್ಳಿ,

ಶಿಕಾರಿಪುರ ಪೊಲೀಸ್ ಉಪ ವಿಭಾಗ ವ್ಯಾಪ್ತಿಯ ಸೊರಬ ತಾಲೂಕಿನ ಆನವಟ್ಟಿ ಬಸ್ ನಿಲ್ದಾಣ, ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದ ಹೊರವಲಯದ ಪ್ರದೇಶಗಳಲ್ಲಿ ಆಯಾ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರು, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ಪೂರ್ವಾಪರ ವಿಚಾರಣೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ.  

ಒಟ್ಟಾರೆ 203 ಲಘು ಪ್ರಕರಣ, ಮೋಟಾರು ವಾಹನ ಕಾಯ್ದೆಯಡಿ 35 ಹಾಗೂ ಕೋಟ್ಪಾ ಕಾಯ್ದೆಯಡಿಯಲ್ಲಿ 10 ಪ್ರಕರಣಗಳನ್ನು ದಾಖಲಿಸಿರುವುದಾಗಿ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *