ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ ಅಪಹರಣ!

Early morning crime of chain thieves in Shimoga: Gold chain stolen from two sides ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ

ಶಿವಮೊಗ್ಗ, ಡಿ. 20: ಶಿವಮೊಗ್ಗ ನಗರದಲ್ಲಿ ಬುಧವಾರ ಬೆಳ್ಳಂಬೆಳಿಗ್ಗೆ ಸರಗಳ್ಳರ ತಂಡವೊಂದು, ಎರಡು ಕಡೆ ಮಹಿಳೆಯರ ಚಿನ್ನದ ಸರ ಅಪಹರಣ ಮಾಡಿದೆ.

ದೊಡ್ಡಪೇಟೆ ಹಾಗೂ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಘಟನೆ ನಡೆದಿದೆ. ಪಲ್ಸರ್ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಮುಂಜಾನೆ ದೇವಾಲಯಕ್ಕೆ ಹೋಗುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಲಾಗಿದೆ.

ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ 60 ಅಡಿ ರಸ್ತೆಯಲ್ಲಿ, ಆಂಜನೇಯ ಸ್ವಾಮಿ ದೇವಾಲಯಕ್ಕೆ ಹೋಗಿ ಬರುತ್ತಿದ್ದ ಯುವತಿಯೋರ್ವಳ ಚಿನ್ನದ ಸರ ಅಪಹರಿಸಲಾಗಿದೆ. ಸರವು 8 ರಿಂದ 10 ಗ್ರಾಂ ತೂಕದ್ದಾಗಿದೆ ಎಂದು ತಿಳಿದುಬಂದಿದೆ.

ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಶರಾವತಿನಗರದ  ಆದಿಚುಂಚನಗಿರಿ ಶಾಲೆ ಸಮೀಪದ ಕಾಲಭೈರವೇಶ್ವರ ದೇವಾಲಯಕ್ಕೆ ಹೋಗಿ ಮನೆಗೆ ಬರುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಅಪಹರಿಸಲಾಗಿದೆ. ಸರವು ಸುಮಾರು 50 ಗ್ರಾಂ ತೂಕದ್ದಾಗಿದೆ ಎಂದು ಹೇಳಲಾಗಿದೆ.

ಸರಗಳ್ಳತನ ಕೃತ್ಯಗಳಲ್ಲಿ ಭಾಗಿಯಾದವರ ಪತ್ತೆಗೆ ಪೊಲೀಸರು ಶೋಧ ನಡೆಸಲಾರಂಭಿಸಿದ್ದಾರೆ. ವಿವಿಧೆಡೆಯ ಸಿಸಿ ಕ್ಯಾಮರಾ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *