ಪದವೀಧರರಿಗೆ 3000 ರೂ. – ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ 1500 ರೂ. ನೀಡುವ ಯುವ ನಿಧಿ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ

3000 for Graduates. - 1500 per month for diploma graduates. Online Application Invitation for Youth Fund Scheme

ಶಿವಮೊಗ್ಗ, ಡಿ. 27: ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

2022-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.  ಅನುಮೋದನೆಗೊಂಡ ಅಭ್ಯರ್ಥಿಗಳಿಗೆ ಮುಂದಿನ 24 ತಿಂಗಳು ಪದವೀಧರರಿಗೆ ಮಾಸಿಕ ರೂ. 3000/- ಹಾಗೂ ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500/- ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.  ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ. 

ಅರ್ಜಿ ಸಲ್ಲಿಸಲು ಕರ್ನಾಟಕದ ನಿವಾಸಿಯಾಗಿರಬೇಕು.  2023 ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಕೆಲಸ ಸಿಗುವವರೆಗೆ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.

ಅರ್ಜಿ ಸಲ್ಲಿಸುವ ದಿನಾಂಕ ಡಿ. 26 ರಿಂದ ಪ್ರಾರಂಭಗೊಂಡಿದ್ದು, ಆಸಕ್ತರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್‍ಗಳೊಂದಿಗೆ ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾ ಸಿಂಧು ಪೋರ್ಟಲ್‍ನಲ್ಲಿ ಯುವನಿಧಿ ಯೋಜನೆ ಸೇವೆ ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *