ಶಿವಮೊಗ್ಗ – ಭದ್ರಾವತಿಯಲ್ಲಿ ಗಾಂಜಾ ಅಡ್ಡೆಗಳ ಮೇಲೆ ಪೊಲೀಸರ ರೈಡ್!

Shimoga - Bhadravati: Police raid on cannabis stalls! ಶಿವಮೊಗ್ಗ – ಭದ್ರಾವತಿಯಲ್ಲಿ ಗಾಂಜಾ ಅಡ್ಡೆಗಳ ಮೇಲೆ ಪೊಲೀಸರ ರೈಡ್!

ಶಿವಮೊಗ್ಗ, ಡಿ. 29: ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಗಾಂಜಾ ಮಾರಾಟ ಹಾಗೂ ಗಾಂಜಾ ಗಿಡ ಬೆಳೆದಿದ್ದ ಸ್ಥಳಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಶಿವಮೊಗ್ಗ : ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದಲ್ಲಿ, ಮನೆಯೊಂದರ ಹಿಂಭಾಗ ಗಾಂಜಾ ಗಿಡ ಬೆಳೆಸಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ನಜರತ್ ಯಾನೆ ನಸ್ರು ಎಂಬ ಆರೋಪಿಯು ತನ್ನ ಮನೆ ಹಿಂಭಾಗ ಗುಪ್ತವಾಗಿ ಗಾಂಜಾ ಗಿಡ ಬೆಳೆಸಿದ್ದ.

ಒಟ್ಟಾರೆ 12 ಕೆಜಿ 350 ಗ್ರಾಂ ತೂಕದ ಹಸಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಮಂಜುನಾಥ್, ಸಬ್ ಇನ್ಸ್’ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

ಭದ್ರಾವತಿ : ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ಕಣಕಟ್ಟೆ ಗೋಂಧಿ ಚಾನೆಲ್ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಭದ್ರಾವತಿ ಸೀಗೆಬಾಗಿ ನಿವಾಸಿ ಸಮೀವುಲ್ಲಾ (37) ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿಯ ದಾದಾಪೀರ್ (28) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

54 ಸಾವಿರ ರೂ. ಮೌಲ್ಯದ 1 ಕೆ.ಜಿ. 618 ಗ್ರಾಂ ತೂಕದ ಒಣ ಗಾಂಜಾ, 1500 ನಗದು, ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ. ಡಿವೈಎಸ್ಪಿ ನಾಗರಾಜ್, ಇನ್ಸ್’ಪೆಕ್ಟರ್ ಶ‍್ರೀಶೈಲಕುಮಾರ್, ಸಬ್ ಇನ್ಸ್’ಪೆಕ್ಟರ್ ಶ‍್ರೀಕೃಷ್ಣ ಕುಮಾರ್ ಮಾನೆ ಮತ್ತವರ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *