ಕೊರೊನಾ : ಮುನ್ನೆಚ್ಚರಿಕೆ ಲಸಿಕೆ ಪಡೆಯಲು ಆರೋಗ್ಯ ಇಲಾಖೆ ಸೂಚನೆ

Corona: Health department instructs to get preventive vaccination ಕೊರೊನಾ : ಮುನ್ನೆಚ್ಚರಿಕೆ ಲಸಿಕೆ ಪಡೆಯಲು ಆರೋಗ್ಯ ಇಲಾಖೆ ಸೂಚನೆ

ಶಿವಮೊಗ್ಗ, ಜ. 2: ಕೋವಿಡ್-19 (covid) ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ ಆರೋಗ್ಯ ಕಾರ್ಯಕರ್ತೆಯರು ಮತ್ತು ಈ ಗುಂಪಿಗೆ ಸೇರಿದ ಫಲಾನುಭವಿಗಳು ಜಿಲ್ಲಾಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕಾರಣ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ಕೋವಿಡ್-19 (covid-19) ಮುನ್ನೆಚ್ಚರಿಕೆ ಡೋಸ್ (vaccine) ಪಡೆದೇ ಇರುವ ಫಲಾನುಭವಿಗಳು ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬೇಕು. ಜಿಲ್ಲೆಗೆ 820 ಡೋಸ್ ಕೋರ್ಬಿವ್ಯಾಕ್ಸ್ ಕೋವಿಡ್-19 (corona) ಲಸಿಕೆ ಸರಬರಾಜಾಗಿದ್ದು ಮುನ್ನೆಚ್ಚರಿಕೆ ಡೋಸ್ ಆಗಿ ಬಳಸಲು ಜಿಲ್ಲಾಧಿಕಾರಿಗಳು ಸೂಚಿಸಿರುತ್ತಾರೆ.

ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿರುತ್ತದೆ. ಆದ್ದರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ಡೋಸ್ ಲಸಿಕೆ ಪಡೆದು 06 ತಿಂಗಳುಗಳು ಅಥವಾ 26 ವಾರಗಳನ್ನು ಪೂರೈಸಿದ 18 ವರ್ಷ ಮೇಲ್ಪಟ್ಟವರು ಮುನ್ನೆಚ್ಚರಕೆ ಡೋಸ್ ಲಸಿಕಾಕರಣಕ್ಕೆ ಬಾಕಿ ಇರುವ ಫಲಾನುಭವಿಗಳು ಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಬಹುದಾಗಿರುತ್ತದೆ ಎಂದು ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ ಹಾಗೂ ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜ್‍ನಾಯ್ಕ್ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *