ಶಾಲಾ ವಾಹನಗಳ ಸುರಕ್ಷತೆ : ಸಿಸಿ ಕ್ಯಾಮರಾ ಅಳವಡಿಕೆ, ಚಾಲಕರ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪರಿಶೀಲನೆ ಕಡ್ಡಾಯ!

School bus safety: Installation of CC camera checking of drivers at the police station is mandatory! Notification of strict action against non-compliant educational institutions ಶಾಲಾ ವಾಹನಗಳ ಸುರಕ್ಷತೆ : ಸಿಸಿ ಕ್ಯಾಮರಾ ಅಳವಡಿಕೆ, ಚಾಲಕರ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪರಿಶೀಲನೆ ಕಡ್ಡಾಯ! ನಿಯಮ ಪಾಲಿಸದಿದ್ದರೆ ಕಾನೂನು ರೀತ್ಯ ಕ್ರಮಕ್ಕೆ ಸೂಚನೆ

ಬೆಂಗಳೂರು, ಜ. 5: ಶಾಲಾ ಮಕ್ಕಳ ಬಸ್ ಗಳಲ್ಲಿ ಸುರಕ್ಷತಾ ಕ್ರಮಗಳ ಅಳವಡಿಕೆ ಕುರಿತಂತೆ, ಶಾಲಾ ಶಿಕ್ಷಣ ಇಲಾಖೆ 8 ಅಂಶಗಳನ್ನೊಳಗೊಂಡ ಸುತ್ತೋಲೆ ಹೊರಡಿಸಿದೆ. ನಿಯಮಗಳ ಕಡ್ಡಾಯ ಪಾಲನೆಗೆ ಆದೇಶ ಹೊರಡಿಸಿದೆ.

ಇತ್ತೀಚೆಗೆ ಕೆಲ ಖಾಸಗಿ ಶಾಲಾ ವಾಹನಗಳಲ್ಲಿ ಮಕ್ಕಳು ಪ್ರಯಾಣಿಸುವಾಗ ಚಾಲಕರು ಮತ್ತು ಸಹಾಯಕರಿಂದ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ಬಸ್, ವ್ಯಾನ್, ಆಟೋ, ರಿ್ಕ್ಷಾ ಹಾಗೂ ಇತರೆ ಶಾಲಾ ವಾಹನಗಳಲ್ಲಿ ನಿಯಮಗಳ ಪಾಲನೆಗೆ ಶಿಕ್ಷಣ ಇಲಾಖೆ ಸೂಚಿಸಿದೆ.

ಸುರಕ್ಷತಾ ನಿಯಮಗಳು : ಶಾಲಾ ಬಸ್ ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಬೇಕು. ಸಂಬಂಧಿಸಿದ ವಾಹನ ಚಾಲಕರು ಮತ್ತು ಸಹಾಯಕರ ಬಗ್ಗೆ ಶಾಲಾ ಆಡಳಿತ ಮಂಡಳಿಗಳು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪರಿಶೀಲನೆ ನಡೆಸಿ, ನಡವಳಿಕೆ ಪ್ರಮಾಣಪತ್ರ ಪಡೆಯುವಂತೆ ಸೂಚಿಸಲಾಗಿದೆ.

ಮಕ್ಕಳನ್ನು ಕರೆತರುವ ಸಹಾಯಕರನ್ನಾಗಿ ಮಹಿಳೆಯನ್ನು ನೇಮಿಸಿಕೊಳ್ಳಬೇಕು. ಶಾಲಾ ವಾಹನದಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ನಿರ್ಬಂಧಿಸಬೇಕು.

ಚಾಲಕರು, ಸಹಾಯಕರು ಪ್ರತಿದಿನ ಕೆಲಸ ಪ್ರಾರಂಭಿಸುವ ಮೊದಲು ಮತ್ತು ಕೊನೆಯಲ್ಲಿ ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಬೇಕು.

ಸದರಿ ದಾಖಲೆಯನ್ನು ಶಾಲೆಗಳು ಪ್ರತಿ ವರ್ಷ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಿ ಅನುಮೋದನೆ ಪಡೆಯಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *