ಮುಂಬೈನಲ್ಲಿ ಕ್ರಿಕೆಟ್ ಆಟದ ವೇಳೆ ತಲೆಗೆ ಚೆಂಡು ಬಡಿದು ಆಟಗಾರ ಸಾವು!

During a cricket game in Mumbai a player who was fielding was hit on the head by a ball and died! ಮುಂಬೈನಲ್ಲಿ ಕ್ರಿಕೆಟ್ ಆಟದ ವೇಳೆ ತಲೆಗೆ ಚೆಂಡು ಬಡಿದು ಫೀಲ್ಡಿಂಗ್ ಮಾಡುತ್ತಿದ್ದ ಆಟಗಾರ ಸಾವು!

ಮುಂಬೈ, ಜ. 10: ಕ್ರಿಕೆಟ್ ಆಟವಾಡುವ ವೇಳೆ ತಲೆಗೆ ಚೆಂಡು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮುಂಬೈನಲ್ಲಿ ಸೋಮವಾರ ನಡೆದಿದೆ.

ಉದ್ಯಮಿ ಜಯೇಶ್ ಚುನ್ನಿಲಾಲ್ ಸಾವ್ಲಾ (52) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.  ಮುಂಬೈನ ಮಾಟುಂಗಾ ಜಿಮ್ಖಾನಾ ದಾಡ್ಕರ್ ಮೈದಾನದಲ್ಲಿ ಈ ಘಟನೆ ನಡೆದಿದೆ. ಕಚ್ಚಿ ಸಮುದಾಯದವರು 50 ವರ್ಷ ಮೇಲ್ಪಟ್ಟವರಿಗೆ ಹಮ್ಮಿಕೊಂಡಿದ್ದ, ‘ಕಚ್ಚಿ ವೀಸಾ ಓಸ್ವಾಲ್ ವಿಕಾಸ್ ಲೆಜೆಂಡ್ ಕಪ್’ ಟಿ – 20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಈ ದುರಂತ ಸಂಭವಿಸಿದೆ.

ಕ್ರಿಕೆಟ್ ಆಟದ ವೇಳೆ ಜಯೇಶ್ ಸಾವ್ಲಾ ಫೀಲ್ಡಿಂಗ್ ಮಾಡುತ್ತಿದ್ದರು. ಸಮಯಾವಕಾಶದ ಕೊರತೆಯಿಂದ ಒಂದೇ ಮೈದನಾದ ಎರಡು ಕಡೆ ಏಕಕಾಲಕ್ಕೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.

ಜಯೇಶ್ ಅವರು ಫೀಲ್ಡಿಂಗ್ ಮಾಡುತ್ತಿದ್ದ ವೇಳೆ, ಮತ್ತೊಂದು ಕಡೆ ನಡೆಯುತ್ತಿದ್ದ ಪಂದ್ಯದ ಬ್ಯಾಟ್ಸ್’ಮನ್ ಹೊಡೆದ ಚೆಂಡು ಅವರ ತಲೆಯ ಹಿಂಬದಿಗೆ ಬಡಿದಿತ್ತು.

ಸ್ಥಳದಲ್ಲಿಯೇ ಅವರು ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದರು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *