ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ

Government Employees' Association requests CM to announce wage revision before Lok Sabha Elections Code of Conduct is announced ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆ ಘೋಷಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ

ಬೆಂಗಳೂರು, ಜ. 16: 7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ  ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.  

ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆ ಯಾಗಿದ್ದು, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ನಿಯೋಗ ಮನವಿ  ಮಾಡಿತು. 

ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆ ಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಿ, ಪಿಂಚಣಿಗೆ ನೀಡುತ್ತಿರುವ  ಕೊಡುಗೆಯನ್ನು ನಿಲ್ಲಿಸಲು ಆದೇಶಿಸಲು ಕೋರಿದರು. 

ತೀವ್ರತರವಾದ 7 ಕಾಯಿಲೆಗಳಿಗೆ  ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ  ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಮನವಿ ಮಾಡಿದರು. ವಿವಿಧ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *