ಸಾರ್ವಜನಿಕ ರಸ್ತೆಗೆ ಬೇಲಿ ಹಾಕಿದ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ..!

Shimoga - Bhadravati Urban Development Authority fenced the public road! ಸಾರ್ವಜನಿಕ ರಸ್ತೆಗೆ ಕಬ್ಬಿಣದ ತಡೆ ಬೇಲಿ ಹಾಕಿದ ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ!

ಶಿವಮೊಗ್ಗ, ಜ. 17: ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ (ಸೂಡಾ) ವು ತನ್ನ ಕಚೇರಿ ಪಕ್ಕದ ಸಾರ್ವಜನಿಕ ರಸ್ತೆಯೊಂದಕ್ಕೆ ಕಬ್ಬಿಣದ ತಡೆ ಬೇಲಿ ಹಾಕಿ, ವಾಹನ ಸಂಚಾರಕ್ಕೆ ಅಡೆತಡೆ ಉಂಟು ಮಾಡಿರುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ!

‘ಕಚೇರಿಯ ಕಾರುಗಳ ನಿಲುಗಡೆಗೆ ತೊಂದರೆಯಾಗುತ್ತಿರುವ ಕಾರಣದಿಂದ ಸದರಿ ಸಾರ್ವಜನಿಕ ರಸ್ತೆ ಬಂದ್ ಮಾಡಲು ಮುಖ್ಯ ಕಾರಣವಾಗಿದೆ’ ಎಂದು ಸ್ಥಳೀಯ ಪತ್ರ ಬರಹಗಾರರ ಸಂಘದ ಮುಖಂಡ ಜಿ.ಎಂ.ಸುರೇಶ್ ಬಾಬು ಅವರು ದೂರಿದ್ದಾರೆ.

‘ಕಳೆದ ಹಲವು ದಶಕಗಳಿಂದ ಸದರಿ ರಸ್ತೆಯಿದೆ. ಇದೀಗ ಏಕಾಏಕಿ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಿದ ಕ್ರಮ ಅಕ್ಷಮ್ಯ ಅಪರಾಧವಾಗಿದೆ. ಇದು ಜನ ವಿರೋಧಿಯಾದುದಾಗಿದೆ. ಸಕಾರಣವಿಲ್ಲದೆ ಜನ – ವಾಹನ ಸಂಚಾರವಿರುವ ರಸ್ತೆ ಬಂದ್ ಮಾಡಲು ಮುಂದಾಗಿರುವುದು ಏಕೆ? ಎಂಬುವುದು ಗೊತ್ತಾಗುತ್ತಿಲ್ಲ.

ಈ ಕುರಿತಂತೆ ಪ್ರಾಧಿಕಾರ ಆಡಳಿತ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಬೇಕು. ತತ್’ಕ್ಷಣವೇ ಸಾರ್ವಜನಿಕ ರಸ್ತೆಗೆ ಹಾಕಿರುವ ಕಬ್ಬಿಣದ ತಡೆಗೋಡೆ ತೆಗೆಯಬೇಕು. ಸುಗಮ ಜನ – ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು’ ಎಂದು ಜಿ.ಎಂ.ಸುರೇಶ್ ಬಾಬು ಆಗ್ರಹಿಸಿದ್ದಾರೆ.

*** ಸದ್ಯ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ‍್ಯಕ್ಷರಾಗಿ ಜಿಲ್ಲಾಧಿಕಾರಿಗಳೇ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಕಚೇರಿ ಪಕ್ಕದ ಸಾರ್ವಜನಿಕ ರಸ್ತೆ ಬಂದ್ ಮಾಡುತ್ತಿರುವ ಪ್ರಾಧಿಕಾರದ ಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿಯೇ ಇದೆಯೇ? ಇಲ್ಲವೇ? ಎಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *