ಸಶಸ್ತ್ರ ಪೊಲೀಸ್ ಕಾನ್ಸ್’ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷಗೆ ವಸ್ತ್ರ ಸಂಹಿತೆ : ಶೂ, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ!

Dress code for written test for armed police constable posts : No shoes jeans pants! ಸಶಸ್ತ್ರ ಪೊಲೀಸ್ ಕಾನ್ಸ್’ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷಗೆ ವಸ್ತ್ರ ಸಂಹಿತೆ : ಶೂ ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ!

ಶಿವಮೊಗ್ಗ, ಜ. 24: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) – 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜ. 28 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಪರೀಕ್ಷಾರ್ಥಿಗಳು ವಸ್ತ್ರ ಸಂಹಿತೆ ಪಾಲಿಸುವುದು ಕಡ್ಡಾಯವಾಗಿದೆ.

ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಬಾರದು. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸುವಂತಿಲ್ಲ.

ಶೂಗಳನ್ನು ಧರಿಸುವಂತಿಲ್ಲ. ತೆಳುವಾದ ಅಡಿ ಭಾಗವಿರುವ ಪಾದರಕ್ಷೆಗಳನ್ನು ಧರಿಸಬೇಕು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಲಾಗಿದೆ ಎಂದು ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *