ವನ್ಯಜೀವಿ ವಸ್ತುಗಳನ್ನು ಹಿಂದಿರುಗಿಸಲು ನಾಗರೀಕರಿಗೆ ಅರಣ್ಯ ಇಲಾಖೆ ಡೆಡ್ ಲೈನ್..!

Forest department dead line for citizens to return wildlife items including tiger claw..! ಹುಲಿ ಉಗುರು ಸೇರಿದಂತೆ ವನ್ಯಜೀವಿ ವಸ್ತುಗಳನ್ನು ಹಿಂದಿರುಗಿಸಲು ನಾಗರೀಕರಿಗೆ ಅರಣ್ಯ ಇಲಾಖೆ ಡೆಡ್ ಲೈನ್..!

ಶಿವಮೊಗ್ಗ, ಜ. 25: ಹುಲಿ ಉಗುರು ಪ್ರಕರಣದ ನಂತರ, ರಾಜ್ಯಾದ್ಯಂತ ಅರಣ್ಯ ಜೀವಿ ವಸ್ತುಗಳನ್ನು ಕಾನೂನುಬಾಹಿರವಾಗಿ ಹೊಂದಿರುವವರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ನಡುವೆ ರಾಜ್ಯ ಅರಣ್ಯ ಇಲಾಖೆಯು, ವನ್ಯಜೀವಿ ವಸ್ತುಗಳನ್ನು ಹಿಂದಿರುಗಿಸಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ.

ವನ್ಯಜೀವಿ, ಅಘೋಷಿತ ವನ್ಯಜೀವಿ / ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏಪ್ರಿಲ್ 11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಸದರಿ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ),

ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು 100 ರೂಪಾಯಿ ಮೌಲ್ಯದ ಛಾಪಾ ಕಾಗದದಲ್ಲಿ ಅಫಿಡವಿಟ್ – ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಅರಣ್ಯ ಇಲಾಖೆಯ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *