ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

Bhadravati MLA BK Sangameshwar Sagara MLA Belur Gopalakrishna as Chairman of Corporation Board ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಶಿವಮೊಗ್ಗ, ಜ. 26: ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿ ಅಧ‍್ಯಕ್ಷ ಸ್ಥಾನಗಳ ಜವಾಬ್ದಾರಿ ವಹಿಸಲಾಗಿದೆ. ಸಂಪುಟ ದರ್ಜೆಯ ಸ್ಥಾನಮಾನ ಕಲ್ಪಿಸಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ (B K Sangameshwar) ಅವರಿಗೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮ (ಕೆ.ಆರ್.ಐ.ಡಿ.ಎಲ್ – ಲ್ಯಾಂಡ್ ಆರ್ಮಿ) ಅಧ್ಯಕ್ಷ ಸ್ಥಾನಕ್ಕೆ ನೇಮಿಸಲಾಗಿದ್ದರೆ,

ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalakrishna) ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ‍್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಲಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಮೂವರು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು. ಅಂತಿಮವಾಗಿ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನದ ಜವಾಬ್ದಾರಿ ನೀಡಲಾಗಿತ್ತು.

ಮುಂದಿನ ದಿನಗಳಲ್ಲಿ ಸರ್ಕಾರದ ಹಂತದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆಯನ್ನು ಕಾಂಗ್ರೆಸ್ ವರಿಷ್ಠರು ಬಿ.ಕೆ.ಸಂಗಮೇಶ್ವರ್ ಹಾಗೂ ಬೇಳೂರು ಗೋಪಾಲಕೃಷ್ಣ ಅವರಿಗೆ ನೀಡಿದ್ದರು. ಇದೀಗ ನಿಗಮ ಮಂಡಳಿಗಳ ಜವಾಬ್ದಾರಿವಹಿಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *