ಶಿವಮೊಗ್ಗ : ಚರಂಡಿ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲಿಯೇ ಸಾವು!

Shimoga: Sewer slab collapsed and person died on the spot! ಶಿವಮೊಗ್ಗ : ಚರಂಡಿ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲಿಯೇ ಸಾವು!

ಶಿವಮೊಗ್ಗ, ಜ. 29: ಚರಂಡಿ ಮೇಲಿನ ಸ್ಲ್ಯಾಬ್ (ಹೊದಿಕೆ) ಕುಸಿದು ಬಿದ್ದ ಪರಿಣಾಮ, ಅದರ ಮೇಲೆ ನಿಂತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗದ ವಿನೋಬನಗರ ಬಡಾವಣೆ ವೀರಣ್ಣನ ಲೇಔಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮುತ್ತಪ್ಪ ಅವರು ಚರಂಡಿ ಸ್ಲ್ಯಾಬ್ ಮೇಲೆ ನಿಂತು ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಲ್ಯಾಬ್ ಕುಸಿದು ಬಿದ್ದಿದೆ.

ಇದರಿಂದ ಮುತ್ತಪ್ಪ ಅವರು ಚರಂಡಿಯೊಳಗೆ ಬಿದ್ದಿದ್ದು ಅವರ ಮೇಲೆಯೆ ಸ್ಲ್ಯಾಬ್ ಗಳು ಬಿದ್ದಿವೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಅಸುನೀಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಚರಂಡಿಯಿಂದ ಶವ ಮೇಲಕ್ಕೆತ್ತಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ವಿನೋಬನಗರ ಠಾಣೆ ಇನ್ಸ್’ಪೆಕ್ಟರ್ ಚಂದ್ರಕಲಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →