17 ವರ್ಷದ ಪುತ್ರನಿಗೆ ಮೊಪೆಡ್ ಓಡಿಸಲು ಅವಕಾಶ ನೀಡಿದ ತಾಯಿಗೆ 30 ಸಾವಿರ ರೂ. ದಂಡ!

30 thousand rupees to the mother who allowed her 17-year-old son to drive a moped. Penalty! 17 ವರ್ಷದ ಪುತ್ರನಿಗೆ ಮೊಪೆಡ್ ಓಡಿಸಲು ಅವಕಾಶ ನೀಡಿದ ತಾಯಿಗೆ 30 ಸಾವಿರ ರೂ. ದಂಡ!

ಶಿವಮೊಗ್ಗ, ಫೆ. 8: 17 ವರ್ಷದ ಪುತ್ರನಿಗೆ ದ್ವಿಚಕ್ರ ವಾಹನ ಓಡಿಸಲು ಅವಕಾಶ ಮಾಡಿಕೊಟ್ಟ ತಾಯಿಯೋರ್ವರಿಗೆ, ಶಿವಮೊಗ್ಗದ 3 ನೇ ಎ.ಸಿ.ಜೆ  ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲವು 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ : 30-01-2024 ರಂದು ಪೂರ್ವ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ಮಠಪತಿ ಅವರು ಶಿವಮೊಗ್ಗದ ಎಸ್.ಪಿ.ಎಂ. ರಸ್ತೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದರು.

ಈ ವೇಳೆ ಮೊಪೆಡ್ ನಲ್ಲಿ ಆಗಮಿಸಿದ ಚಾಲಕನ ಬಳಿ ಡಿ.ಎಲ್. ಸೇರಿದಂತೆ ವಾಹನದ ದಾಖಲಾತಿ ಕೇಳಿದ್ದರು. ಅಪ್ರಾಪ್ತ ವಯಸ್ಸಿನ ಬಾಲಕ, ಮೊಪೆಡ್ ಓಡಿಸುತ್ತಿದ್ದುದು ಗಮನಕ್ಕೆ ಬಂದಿತ್ತು. ಸಂಚಾರಿ ನಿಯಮಗಳ ಉಲ್ಲಂಘನೆಯಾಗಿರುವುದು ಕಂಡುಬಂದಿತ್ತು.

ಅಪ್ರಾಪ್ತ ವಯೋಮಾನದ ಬಾಲಕನಿಗೆ ವಾಹನ ಚಲಾಯಿಸಲು ಅವಕಾಶ ನೀಡಿದ ಆರೋಪದ ಮೇರೆಗೆ, ಸದರಿ ಮೊಪೆಡ್’ನ ವಾಹನ ಮಾಲೀಕರೂ ಆದ ಬಾಲಕನ ತಾಯಿಯ ವಿರುದ್ದ ಶಿವಮೊಗ್ಗ ಪೂರ್ವ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ದಾಖಲಿಸಲಾಗಿತ್ತು. ಸದರಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ವಾಹನ ಮಾಲೀಕರಾದ ತಾಯಿಗೆ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *