ಭೂ ಸುಧಾರಣಾ ಕಾಯ್ದೆ 2020 ಕ್ಕೆ ತಿದ್ದುಪಡಿ : ಬೆಂಗಳೂರಿನಲ್ಲಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಸಿಎಂ ಭರವಸೆ

ಭೂ ಸುಧಾರಣಾ ಕಾಯ್ದೆ 2020 ಕ್ಕೆ ತಿದ್ದುಪಡಿ : ಬೆಂಗಳೂರಿನಲ್ಲಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಸಿಎಂ ಭರವಸೆ

ಬೆಂಗಳೂರು ಫೆ. 10: ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. 

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88 ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಶವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು. 

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮರ್ಗದರ್ಶನ ನನಗೆ ಅನುಕೂಲವಾಯಿತು ಎಂದರು. 

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಇವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು.  ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟ ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ ಎಂದರು.  

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು. 

ಬಡಗಲಾಪುರ ನಾಗೇಂದ್ರ ಅವರು  ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *