ಕೋರ್ಟ್’ಗೆ ಹಾಜರಾಗದ ಆರೋಪಿಗಳ ಪತ್ತೆ ಹಚ್ಚಿದ – ಉತ್ತಮವಾಗಿ ಠಾಣಾ ಕಡತಗಳ ನಿರ್ವಹಣೆ ಮಾಡಿದ ಪೊಲೀಸ್ ಸಿಬ್ಬಂದಿಗಳಿಗೆ ಸನ್ಮಾನ

Kudos to the police personnel who tracked down the accused who did not appear in court and managed the police station files well ಕೋರ್ಟ್’ಗೆ ಹಾಜರಾಗದ ಆರೋಪಿಗಳ ಪತ್ತೆ ಹಚ್ಚಿದ, ಉತ್ತಮವಾಗಿ ಠಾಣಾ ಕಡತಗಳ ನಿರ್ವಹಣೆ ಮಾಡಿದ ಪೊಲೀಸ್ ಸಿಬ್ಬಂದಿಗಳಿಗೆ ಸನ್ಮಾನ

ಶಿವಮೊಗ್ಗ, ಫೆ. 12: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದ  ಹಾಗೂ ಉತ್ತಮವಾಗಿ ಠಾಣಾ ಕಡತಗಳ ನಿರ್ವಹಣೆ ಮಾಡಿದ, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಸನ್ಮಾನಿಸಿ ಅಭಿನಂದಿಸಿದ್ದಾರೆ.

ಆರೋಪಿಗಳ ಪತ್ತೆ : ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ನಾಗರಾಜ್ ಹೆಚ್ ಸಿ ಹಾಗೂ ಕುಮಾರ್ ನಾಯ್ಕ್ ಹೆಚ್ ಸಿ ರವರು ಒಟ್ಟು 7 ಎಲ್.ಪಿ.ಆರ್, 7 ಪ್ರೊಕ್ಲಮೇಷನ್ ಹಾಗೂ 19 ಜನ ತಲೆ ಮರೆಸಿಕೊಂಡಿದ್ದ ವಾರೆಂಟ್ ಆಸಾಮಿಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಫಲರಾಗಿದ್ದಾರೆ.

ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ರಾಘವೇಂದ್ರ ಹೆಚ್ ಸಿ ಹಾಗೂ ಸಜ್ಜನ್ ರಾವ್ ಸಿಪಿಸಿ ರವರು ಒಟ್ಟು 4 ಎಲ್.ಪಿ.ಆರ್, 3 ಪ್ರೊಕ್ಲಮೇಷನ್ ಮತ್ತು 14  ಜನ ತಲೆ ಮರೆಸಿಕೊಂಡಿದ್ದ ವಾರೆಂಟ್ ಆಸಾಮಿಗಳನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಕಡತ ನಿರ್ವಹಣೆ : ಹಾಗೆಯೇ ಸಾಗರ ಪೊಲೀಸ್ ಠಾಣೆಯ ಶಂಕರ್ ಹೆಚ್ ಸಿ ಮತ್ತು ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯ ದ್ಯಾಮಣ್ಣ ಹೆಚ್ ಸಿ ಅವರು, ಠಾಣಾ ಬರಹಗಾರರಾಗಿ ಮತ್ತು ಕಡತಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಿದ್ದರು.

ಸನ್ಮಾನ : ಶಿವಮೊಗ್ಗದ ಎಸ್ಪಿ ಕಚೇರಿಯಲ್ಲಿ ಫೆ. 12 ರಂದು ಸದರಿ ಸಿಬ್ಬಂದಿಗಳಿಗೆ ಎಸ್ಪಿ ಅವರು ಸನ್ಮಾನಿಸುವುದರ ಜೊತೆಗೆ, ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *