ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವಾದರೆ ಕಠಿಣ ಕ್ರಮ : ಸಿಎಂ

Strict action if Pakistan Zindabad slogan is true: CM ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವಾದರೆ ಕಠಿಣ ಕ್ರಮ : ಸಿಎಂ

ಬೆಂಗಳೂರು , ಫೆಬ್ರವರಿ 28: ‘ಎಫ್. ಎಸ್ .ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ, ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ, ಅಂತವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ವಿಧಾನಸೌಧದಲ್ಲಿ ಇಂದು ಮಾಧ್ಯಮದರೊಂದಿಗೆ ಮಾತನಾಡಿದರು. ರಾಷ್ಟ್ರದ  ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು ಎಂದರು. ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ‘ಕೂಗುವವರಿಗೆ ಇಲ್ಲಿಯಾದರೇನು, ಎಲ್ಲಾದರೇನು? ನಿಜ ಆಗಿದ್ದರೆ ಕಠಿಣ ಕ್ರಮ ಆಗುತ್ತದೆ’ ಎಂದರು.

ಏನೀದು ಪ್ರಕರಣ?: ಮಂಗಳವಾರ ರಾಜ್ಯಸಭೆ ಚುನಾವಣೆ ಮತ ಎಣಿಕೆ ಫಲಿತಾಂಶ ಹೊರಬಿದ್ದ ನಂತರ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ, ಕಾಂಗ್ರೆಸ್ ವಿಜೇತ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಕೆಲ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಆರೋಪ ಕೇಳಿಬಂದಿದೆ.

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ, ವೀಡಿಯೋ ತುಣುಕುಗಳನ್ನು ಪೊಲೀಸರು ಸಂಗ್ರಹಿಸಿ ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್.ಎಸ್.ಎಲ್) ಪರಿಶೀಲನೆಗೆ ರವಾನಿಸಲಾಗಿದೆ. ಜೊತೆಗೆ ಘಟನೆಯ ಕುರಿತಂತೆ ತನಿಖೆ ನಡೆಸಲು ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *