ಮಂಗಳೂರು : ಕಡಬದ ಪಿಯು ಕಾಲೇಜ್ ಆವರಣದಲ್ಲಿಯೇ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ – ದುಷ್ಕರ್ಮಿಯ ಬಂಧನ!

Mangaluru : A miscreant threw acid on three female students in the premises of PU College in Kadaba! ಮಂಗಳೂರು : ಕಡಬದ ಪಿಯು ಕಾಲೇಜ್ ಆವರಣದಲ್ಲಿಯೇ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿದ ದುಷ್ಕರ್ಮಿ!

ಕಡಬ (ಮಂಗಳೂರು), ಮಾ. 4: ಸರ್ಕಾರಿ ಪದವಿ ಪೂರ್ವ ಕಾಲೇಜ್ ನ ಕಾರಿಡಾರ್ ನಲ್ಲಿಯೇ ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ, ದುಷ್ಕರ್ಮಿಯೋರ್ವ ಆಸಿಡ್ ದಾಳಿ ನಡೆಸಿರುವ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮಾ. 4 ರ ಸೋಮವಾರ ಬೆಳಿಗ್ಗೆ ನಡೆದಿದೆ.

ಇದರಲ್ಲಿ ಓರ್ವ ವಿದ್ಯಾರ್ಥಿನಿಗೆ ಗಂಭೀರ ಸ್ವರೂಪದ ಸುಟ್ಟ ಗಾಯವಾಗಿದೆ. ಮೂವರನ್ನು ಕಡಬ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಕೇರಳ ರಾಜ್ಯದ ಮಲಪ್ಪುರಂನ ಅಬೀನ್ (23) ಆಸಿಡ್ ಎರಚಿದ ಆರೋಪಿ ಎಂದು ಗುರುತಿಸಲಾಗಿದೆ. ಈತ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ಹೇಳಲಾಗಿದೆ. ಆಸಿಡ್ ಎರಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಲೇಜ್ ನ ಕಾರಿಡಾರ್ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರು ಕುಳಿತ್ತಿದ್ದ ವೇಳೆ, ಆರೋಪಿಯು ಮಾಸ್ಕ್ ಹಾಗೂ ಟೋಪಿ ಧರಿಸಿ ಆಗಮಿಸಿ ನಿರ್ದಿಷ್ಟ ವಿದ್ಯಾರ್ಥಿನಿಯ ಮೇಲೆ ಆಸಿಡ್ ಎರಚಿದ್ದಾನೆ. ಈ ವೇಳೆ ಸದರಿ ವಿದ್ಯಾರ್ಥಿನಿಯ ಪಕ್ಕದಲ್ಲಿ ಕುಳಿತ್ತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೂ ಆಸಿಡ್ ತಗುಲಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಪ್ರಾಥಮಿಕ ಹಂತದ ಮಾಹಿತಿ ಅನುಸಾರ, ಪ್ರೇಮ ವೈಫಲ್ಯ ಕಾರಣದಿಂದ ಅಬೀನ್ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಘಟನೆಯಿಂದ ಕಾಲೇಜ್ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಗಳು ಭಯಭೀತರಾಗುವಂತಾಗಿತ್ತು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

One Comment on “ಮಂಗಳೂರು : ಕಡಬದ ಪಿಯು ಕಾಲೇಜ್ ಆವರಣದಲ್ಲಿಯೇ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ – ದುಷ್ಕರ್ಮಿಯ ಬಂಧನ!”

Leave a Reply

Your email address will not be published. Required fields are marked *