ಲೋಕಸಭೆ ಚುನಾವಣೆ : ಮೂರು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ – ಸಿಎಂ ಸಿದ್ದರಾಮಯ್ಯ

Lok Sabha Elections: Final list of Congress candidates in three days - CM Siddaramaiah ಲೋಕಸಭೆ ಚುನಾವಣೆ : ಮೂರು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ – ಸಿಎಂ ಸಿದ್ದರಾಮಯ್ಯ

ಬೀದರ್, ಮಾರ್ಚ್ 07 : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ  ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣ ಸುಳಿವು ದೊರೆತಿದೆ. ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್.ಐ.ಎ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು ತನಿಖೆ ಜಾರಿಯಲ್ಲಿದೆ ಎಂದರು. 

ಹೆಚ್ಚಿನ ಹಣ : ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು  ಎಂದರು.

ಪುನರುಚ್ಚರಿಸಿದ್ದಾರೆ : ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರ ಹೇಳಿಕೆ  ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ ಎಂದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *