ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದ ಪೋಕ್ಸೋ ಕೇಸ್  : ಸಿಐಡಿ ತನಿಖೆಗೆ ಹಸ್ತಾಂತರ!

POCSO case against former CM BS Yeddyurappa: Handed over to CID investigation! ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದ ಪೋಕ್ಸೊ ಕೇಸ್ : ಸಿಐಡಿ ತನಿಖೆಗೆ ಹಸ್ತಾಂತರ!

ಬೆಂಗಳೂರು, ಮಾ. 15: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (b s yediyurappa) ವಿರುದ್ದ ದಾಖಲಾಗಿರುವ ಪೋಕ್ಸೊ (posco) ಪ್ರಕರಣದ ತನಿಖೆಯನ್ನು ಸಿಐಡಿ (cid) ತನಿಖೆಗೊಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತಂತೆ ರಾಜ್ಯ ಪೊಲೀಸ್ ಇಲಾಖೆ ಮಹಾನಿರ್ದೇಶಕರು ಕಚೇರಿ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಹೇಳಲಾಗಿದೆ.

17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ (sexual harassment) ನೀಡಿದ ಆರೋಪ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದೆ. ಈ ಕುರಿತಂತೆ ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ. ಮಾ. 14 ರ ರಾತ್ರಿ ಬೆಂಗಳೂರಿನ (bengaluru) ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ (fir) ದಾಖಲಾಗಿದೆ.

ಮಕ್ಕಳ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ ) ಯ ಸೆಕ್ಷನ್ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ (ipc) ಸೆಕ್ಷನ್ 354 (ಎ) (ಲೈಂಗಿಕ ಕಿರುಕುಳ) ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೂರಿನಲ್ಲೇನಿದೆ? : ಪ್ರಕರಣವೊಂದರಲ್ಲಿ ಸಹಾಯ ಕೋರಿ ಫೆಬ್ರವರಿ 2 ರಂದು ತಮ್ಮ ಪುತ್ರಿಯೊಂದಿಗೆ ಯಡಿಯೂರಪ್ಪರ ಮನೆಗೆ ಹೋಗಿದ್ದಾಗ, ಅವರು ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ನಂತರ ಕ್ಷಮೆಯಾಚಿಸಿ, ಈ ವಿಷಯ ಯಾರಿಗೂ ತಿಳಿಸದಂತೆ ಹೇಳಿದ್ದರು ಎಂದು ಸಂತ್ರಸ್ತ ಬಾಲಕಿ ತಾಯಿ ಪೊಲೀಸರಿಗೆ (police) ನೀಡಿರುವ ದೂರಿನಲ್ಲಿ (complaint) ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *