ಶಿಕಾರಿಪುರದ ತೋಗರ್ಸಿ ಬಳಿ ಶಿವಮೊಗ್ಗದ ಯುವಕನ ಭೀಕರ ಹತ್ಯೆ!

ಶಿಕಾರಿಪುರದ ತೋಗರ್ಸಿ ಬಳಿ ಶಿವಮೊಗ್ಗದ ಯುವಕನ ಭೀಕರ ಹತ್ಯೆ! *ಕಾರಿಗೆ ಬೆಂಕಿ ಹಚ್ಚಿ ದೇಹ ಸುಟ್ಟು ಹಾಕಿದ ಹಂತಕರು!!

ಶಿಕಾರಿಪುರ / ಶಿವಮೊಗ್ಗ, ಮಾ. 16: ಶಿಕಾರಿಪುರ (shikaripura) ತಾಲೂಕಿನ ಶಿರಾಳಕೊಪ್ಪ (shiralakoppa) ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ (shimoga) ಯುವಕನೋರ್ವನನ್ನು ಭೀಕರವಾಗಿ ಕೊಲೆ (murder) ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಶಿವಮೊಗ್ಗದ ಗಾಡಿಕೊಪ್ಪದ (gadikoppa) ಮೈಸೂರು ಬೀದಿ ನಿವಾಸಿ ವೀರೇಶ್ (27) ಎಂಬ ಯುವಕನೇ ಭೀಕರವಾಗಿ ಹತ್ಯೆಗೀಡಾದ ಯುವಕ ಎಂದು ಹೇಳಲಾಗಿದೆ. ತೋಗರ್ಸಿ (togarsi) ಹೊರವಲಯದ ಸ್ಮಶಾನದ ಬಳಿ ಘಟನೆ ನಡೆದಿದೆ.

ಆತ ಕೊಂಡೊಯ್ದ ಇನ್ನೋವಾ ಕಾರಿನ (innvoa car) ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹವು ಸಂಪೂರ್ಣ ಸುಟ್ಟು ಕರಕಲಾಗಿದೆ. ಯುವಕನನ್ನು ಯಾವ ರೀತಿಯಲ್ಲಿ ಹತ್ಯೆ ಮಾಡಲಾಗಿದೆ ಎಂಬಿತ್ಯಾದಿ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.

ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನ ಮೊಬೈಲ್ ಫೋನ್ ಗೆ ಕರೆ ಮಾಡಿದ್ದರು. ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದರು. ನಂತರ ಮನೆಗೆ ಹಿಂದಿರುಗಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್‌ಪಿ (dysp) ಕೇಶವ್‍,  ಇನ್ಸ್’ಪೆಕ್ಟರ್ (pi) ರುದ್ರೇಶ್, ಶಿರಾಳಕೊಪ್ಪ ಠಾಣೆ (shiralakoppa police station) ಸಬ್ ಇನ್ಸ್’ಪೆಕ್ಟರ್ (psi) ರಮೇಶ್ ಮತ್ತವರ  ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *