ಭದ್ರಾವತಿಯ ಭದ್ರಾ ನದಿಯಲ್ಲಿ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

Dead body found in Bhadra river in Bhadravati: Request to trace the heirs ಭದ್ರಾವತಿಯ ಭದ್ರಾ ನದಿಯಲ್ಲಿ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಭದ್ರಾವತಿ (bhadravathi), ಏ.12 : ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೌಳಿಗರ ಬೀದಿ ಹಿಂಭಾಗದ ಭದ್ರಾ ನದಿಯಲ್ಲಿ (bhadra river) ಭಾಗಶಃ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ (dead body) ಪತ್ತೆಯಾಗಿದೆ. 

ಮೃತರ ಹೆಸರು, ವಿಳಾಸ ಸೇರಿದಂತೆ ಯಾವುದೇ ವಿವರಗಳು ಪತ್ತೆಯಾಗಿಲ್ಲ. ಮೃತರಿಗೆ ಸುಮಾರು 45 ರಿಂದ 50 ವರ್ಷ ವಯೋಮಾನವಿದೆ. 5 ಅಡಿ ಎತ್ತರ, ದುಂಡು ಮುಖ,  ಸಾಧಾರಣ ಮೈಕಟ್ಟು ಹೊಂದಿದ್ದಾರೆ. ತಲೆಯಲ್ಲಿ ಸುಮಾರು 3 ಇಂಚು ಉದ್ದದ ಗಾಯದ ಗುರುತು, ಎಡಕಣ್ಣಿನ ಹುಬ್ಬಿನ ಮೇಲೆ ಹಳೇಯ ಗಾಯದ ಗುರುತು ಇರುತ್ತದೆ. ( www.udayasaakshi.com )

ದೇಹದ ಹಲವೆಡೆ ಚರ್ಮ ಕೊಳೆತಿದೆ. ಕಣ್ಣುಗಳನ್ನು ಜಲಚರಗಳು ತಿಂದಿವೆ. ಮೈ ಮೇಲೆ ಹಳದಿ ಬಣ್ಣದ ಅಂಗಿ, ಬೂದು ಬಣ್ಣದ ಪ್ಯಾಂಟ್ ಧರಿಸಿರುವುದು ಕಂಡುಬಂದಿದೆ. 

ಹೆಚ್ಚಿನ ಮಾಹಿತಿಗೆ ಭದ್ರಾವತಿ (bhadravathi) ಹಳೇನಗರ ಪೊಲೀಸ್ ಠಾಣೆಯನ್ನು (old town police station) ಸಂಪರ್ಕಿಸುವಂತೆ ಇನ್ಸ್’ಪೆಕ್ಟರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. (www.udayasaakshi.com )

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *