ಶಿವಮೊಗ್ಗ : ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

Shimoga: Geetha Sivarajkumar submits nomination paper ಶಿವಮೊಗ್ಗ : ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಶಿವಮೊಗ್ಗ (shivamogga), ಏ. 15: ಶಿವಮೊಗ್ಗ ಲೋಕಸಭಾ ಕ್ಷೇತ್ರದ (shimoga loksabha constituency) ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ (bangarappa) ಪುತ್ರಿ ಗೀತಾ ಶಿವರಾಜಕುಮಾರ್ (geetha shivarajakumar) ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ (dc office) ಜಿಲ್ಲಾ ಚುನಾವಣಾಧಿಕಾರಿ ಗುರುದತ್ ಹೆಗಡೆ ಅವರಿಗೆ ಗೀತಾ ಶಿವರಾಜಕುಮಾರ್ ಅವರು ಉಮೇದುವಾರಿಕೆ ಅರ್ಜಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಪತಿ ನಟ ಶಿವರಾಜಕುಮಾರ್ (actor shivarajkumar), ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಇತರರಿದ್ದರು.

ಮೆರವಣಿಗೆಯಲ್ಲಿ ಆಗಮಿಸಿ ಗೀತಾ ಶಿವರಾಜಕುಮಾರ್ ಅವರು ನಾಮಪತ್ರ ಸಲ್ಲಿಕೆ (nomination file) ಮಾಡಬೇಕಾಗಿತ್ತು. ಆದರೆ ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಿದ್ದ ಸಮಯ ಮೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕೂ ಮುನ್ನವೇ ಅವರು ನಾಮಪತ್ರ ಸಲ್ಲಿಸಿದರು.

ಮೆರವಣಿಗೆ :  ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ರಾಮಣ್ಣಶ್ರೇಷ್ಠಿ ಪಾರ್ಕ್ ಸರ್ಕಲ್ ಆವರಣದಿಂದ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾತ್ತು. ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಿವಿಧ ಕಲಾ ತಂಡಗಳು ಮರವಣಿಗೆಯಲ್ಲಿ ಭಾಗಿಯಾಗಿದ್ದವು.

ಗಾಂಧಿಬಜಾರ್ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಿದೆ. ಕೋರ್ಟ್ ಸರ್ಕಲ್ ಆವರಣದಲ್ಲಿ ಮೆರವಣಿಗೆ ಅಂತ್ಯಗೊಳ್ಳಲಿದೆ. ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಭಾಗಿಯಾಗಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *