ಲಾರಿ ಡಿಕ್ಕಿಯಿಂದ ರೈಲ್ವೆ ಹಳಿ ಏರುಪೇರು : ರೈಲುಗಳ ಸಂಚಾರದಲ್ಲಿ ವ್ಯತ್ಯಯ!

Bhadravati - Defect in the railway track due to lorry collision: Disruption in the movement of trains! ಭದ್ರಾವತಿ - ಲಾರಿ ಡಿಕ್ಕಿಯಿಂದ ರೈಲ್ವೆ ಹಳಿಯಲ್ಲಿ ದೋಷ : ರೈಲುಗಳ ಸಂಚಾರದಲ್ಲಿ ವ್ಯತ್ಯಯ!

ಭದ್ರಾವತಿ (bhadravathi), ಏ. 18: ಭದ್ರಾವತಿ ಪಟ್ಟಣದ ಅಂಡರ್ ಪಾಸ್ (railway under pass) ಬಳಿ ಮೇಲ್ಭಾಗದ ಕಬ್ಬಿಣದ ಬ್ಯಾರಿಕೇಡ್ ಗೆ ಗುರುವಾರ ಮುಂಜಾನೆ ಲಾರಿಯೊಂದು (lorry) ಡಿಕ್ಕಿ ಹೊಡೆದ ಪರಿಣಾಮ, ಹಳಿಯಲ್ಲಿ (railway track) ತಾಂತ್ರಿಕ ದೋಷ ಉಂಟಾಗಿತ್ತು. ಇದರಿಂದ ಶಿವಮೊಗ್ಗ – ಭದ್ರಾವತಿ (shivamogga – bhadravathi) ನಡುವೆ ಎರಡು ರೈಲುಗಳ  ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರೈಲ್ವೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮರೋಪಾದಿಯಲ್ಲಿ ಹಳಿ ದುರಸ್ತಿ ಕಾರ್ಯ ನಡೆಸಿದ್ದಾರೆ. ರೈಲುಗಳ (railways) ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ. ( www.udayasaakshi.com )

ಹಳಿ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ, ಬೆಳಿಗ್ಗೆ 4 ಗಂಟೆ 45 ನಿಮಿಷಕ್ಕೆ ಶಿವಮೊಗ್ಗ ನಿಲ್ದಾಣ ತಲುಪಬೇಕಿದ್ದ ಮೈಸೂರು – ತಾಳಗುಪ್ಪ ಏಕ್ಸ್’ಪ್ರೆಸ್ ರೈಲು (mysore – talguppa express train) ಬೆಳಿಗ್ಗೆ 6.45 ಕ್ಕೆ ತಲುಪಿದೆ. ಹಾಗೆಯೇ ಶಿವಮೊಗ್ಗದಿಂದ ಬೆಳಿಗ್ಗೆ 5.15 ನಿಮಿಷಕ್ಕೆ ಹೊರಡಬೇಕಿದ್ದ ಬೆಂಗಳೂರು ಜನ ಶತಾಬ್ದಿ (shimoga bangalore jan shatabdi) ರೈಲು 6 ಗಂಟೆ 35 ನಿಮಿಷಕ್ಕೆ ಹೊರಟಿದೆ ಎಂದು ತಿಳಿದುಬಂದಿದೆ.

ಕಾರಣವೇನು? : ಭದ್ರಾವತಿ ಪಟ್ಟಣದ ಅಂಡರ್ ಪಾಸ್ ಬಳಿ ಎತ್ತರದ ವಾಹನಗಳು ಸಂಚರಿಸದಂತೆ ತಡೆಯಲು ಕಬ್ಬಿಣದ ಬ್ಯಾರಿಕೇಡ್ ಹಾಕಲಾಗಿದೆ. ಆದರೆ ಸದರಿ ಬ್ಯಾರಿಕೇಡ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದಾನೆ (hit and run). ಇದರಿಂದ ಕಬ್ಬಿಣದ ಬ್ಯಾರಿಕೇಡ್ (barricade) ಮುರಿದುಬಿದ್ದಿದ್ದು, ಸ್ಥಳದ ಬಳಿ ಹಳಿಯಲ್ಲಿ ತಾಂತ್ರಿಕ ದೋಷ (technical problem) ಕಂಡುಬಂದಿತ್ತು. ತಕ್ಷಣವೇ ರೈಲ್ವೆ ಇಲಾಖೆ ರೈಲುಗಳ ಸಂಚಾರ ಸ್ಥಗಿತಗೊಳಿಸಿ, ದುರಸ್ತಿ ಕಾರ್ಯ ನಡೆಸಿದೆ. ( www.udayasaakshi.com )

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *