ಭದ್ರಾವತಿಯಲ್ಲಿ ಭಾರೀ ಪ್ರಮಾಣದ ಗಾಂಜಾ ವಶ : ಮಹಿಳೆಯ ಬಂಧನ!

Huge amount of ganja seized in Bhadravati : Woman arrested! ಭದ್ರಾವತಿಯಲ್ಲಿ ಭಾರೀ ಪ್ರಮಾಣದ ಗಾಂಜಾ ವಶ : ಮಹಿಳೆಯ ಬಂಧನ!

ಭದ್ರಾವತಿ, ಏ. 23: ಗಾಂಜಾ (marijuana)  ಸಾಗಾಣೆ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಮಹಿಳೆಯೋರ್ವರನ್ನು ಬಂಧಿಸಿದ ಘಟನೆ, ಭದ್ರಾವತಿ (Bhadravati) ನಗರದ ಹೊಸಮನೆ ಪೊಲೀಸ್‌ ಠಾಣಾ (Hosamane police station) ವ್ಯಾಪ್ತಿಯ ಸತ್ಯಸಾಯಿ ನಗರದಲ್ಲಿ ಸೋಮವಾರ ನಡೆದಿದೆ.

ಸತ್ಯಸಾಯಿ ನಗರದ ನಿವಾಸಿ ಹುಸೇನಾಬಿ (35) ಬಂಧಿತ ಮಹಿಳೆ ಎಂದು ಗುರುತಿಸಲಾಗಿದೆ. ಅಪಾದಿತೆಯು ಗಾಂಜಾ ಸಾಗಾಣೆ ಮಾಡುತ್ತಿರುವ ಕುರಿತಂತೆ ಲಭ್ಯವಾದ ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. 

4,50,000 ರೂ. ಮೌಲ್ಯದ 7 ಕೆ.ಜಿ. 590 ಗ್ರಾಂ ಒಣ ಗಾಂಜಾವನ್ನು (ganja) ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್ಪಿ ಜಿ ಕೆ ಮಿಥುನ್ ಕುಮಾರ್, ಎಎಸ್ಪಿಗಳಾದ ಅನಿಲ್ ಕುಮಾರ ಭೂಮರೆಡ್ಡಿ, ಎ.ಜಿ.ಕಾರಿಯಪ್ಪ, ಡಿವೈಎಸ್ಪಿ ನಾಗರಾಜ್, ಇನ್ಸ್‌ಪೆಕ್ಟರ್ ಶ್ರೀಶೈಲಕುಮಾರ್ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಕೃಷ್ಣ ಕುಮಾರ್ ಬಿ ಮಾನೆ ಮತ್ತವರ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

ಆಪಾದಿತೆಯ ವಿರುದ್ದ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ (NDP’s act) ಕಲಂ 20 (ಬಿ) ii (ಬಿ) ರೀತ್ಯಾ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆಯು ಮಂಗಳವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *