ಅಡಕೆ ದಾಸ್ತಾನು ಗೋದಾಮುಗಳ ಮೇಲೆ ದಾಳಿ : ಭಾರೀ ಪ್ರಮಾಣದ ಅಕ್ರಮ ದಾಸ್ತಾನು ಪತ್ತೆ!

Raid on arecanut stock warehouses : Huge amount of illegal stock found! ಅಡಕೆ ದಾಸ್ತಾನು ಗೋದಾಮುಗಳ ಮೇಲೆ ದಾಳಿ : ಭಾರೀ ಪ್ರಮಾಣದ ಅಕ್ರಮ ದಾಸ್ತಾನು ಪತ್ತೆ!

ಶಿವಮೊಗ್ಗ (shivamogga), ಮೇ 29: ಅಡಕೆ ವರ್ತಕರ ವ್ಯಾಪಾರ ಗೋದಾಮು ಸ್ಥಳಗಳ ಮೇಲೆ ದಿಢೀರ್ ದಾಳಿ (raid) ನಡೆಸಿ, ಲಕ್ಷಾಂತರ ಮೊತ್ತದ ಅಕ್ರಮ ಅಡಕೆ ವಹಿವಾಟು ದಾಸ್ತಾನು ಪತ್ತೆ ಹಚ್ಚಿ ದಂಡ ವಿಧಿಸಿದ ಘಟನೆ ನಡೆದಿದೆ.

ಶಿವಮೊಗ್ಗ ವಿಭಾಗೀಯ ವ್ಯಾಪ್ತಿಯ ಜಾರಿ ಮತ್ತು ಜಾಗೃತ ದಳ ಹಾಗೂ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸುಮಾರು 40 ಅಧಿಕಾರಿಗಳ ತಂಡ ಮಲೆನಾಡು ವಿಭಾಗ ವ್ಯಾಪ್ತಿಯ ಎಲ್ಲಅಡಕೆ ವರ್ತಕರ ವ್ಯಾಪಾರ ಗೋದಾಮು (arecanut stock warehouses) ಸ್ಥಳಗಳ ಮೇಲೆ ಈ ದಾಳಿ ನಡೆಸಿದೆ.

ಈ ವಿಶೇಷ ಕಾರ್ಯಾಚರಣೆಯ (special raid) ನೇತೃತ್ವವನ್ನು, ಶಿವಮೊಗ್ಗದ (shimoga) ಮಲೆನಾಡು ವಿಭಾಗೀಯ ತೆರಿಗೆ  ಜಾಗೃತ ದಳ ಹಾಗೂ ಸರಕು ಮತ್ತು ಸೇವಾ ತೆರಿಗೆಗಳ ಜಂಟಿ ಆಯುಕ್ತರುಗಳು ಹಾಗೂ ಉಪ ಆಯುಕ್ತರುಗಳ ನೇತೃತ್ವದಲ್ಲಿ ನಡೆಸಲಾಗಿದೆ.

ಅಕ್ರಮವಾಗಿ (illegal) ಅಡಕೆ ಸಂಗ್ರಹಿಸಿದ ವ್ಯಾಪಾರಿಗಳ (merchants) ಮೇಲೆ  ಜಿ.ಎಸ್ ಟಿ ಕಾಯ್ದೆ (gst act) ನಿಯಮಾನುಸಾರ ಕ್ರಮ ಜರುಗಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *