ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರಗೆ ಮುನ್ನಡೆ!

Shimoga Lok Sabha Constituency: BJP candidate B. Y. Raghavendra leads! ಶಿವಮೊಗ್ಗ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರಗೆ ಮುನ್ನಡೆ!

ಶಿವಮೊಗ್ಗ, ಜೂ. 4: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಆರಂಭಿಕ ಮುನ್ನಡೆ ಲಭ್ಯವಾಗಿದೆ.

ಬಿ.ವೈ.ರಾಘವೇಂದ್ರ ಅವರು 39,164 ಮತಗಳಿಸಿದ್ದಾರೆ. ಮತಗಳಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಎರಡನೇ ಸ್ಥಾನದಲ್ಲಿದ್ದು, 26,263 ಮತ ಗಳಿಸಿದ್ದಾರೆ.

ಮೂರನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರಿದ್ದು, 2391 ಮತ ಸಂದಾಯವಾಗಿದೆ. ಮತ ಎಣಿಕೆ ಮುಂದುವರಿದಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *