ಶಿವಮೊಗ್ಗ : ಹಂದಿ ಮಾಲೀಕರಿಗೆ ಪಾಲಿಕೆಯಿಂದ ಎಚ್ಚರಿಕೆ!

shimoga : warning from the corporation to pig owners! ಶಿವಮೊಗ್ಗ : ಹಂದಿ ಮಾಲೀಕರಿಗೆ ಪಾಲಿಕೆಯಿಂದ ಎಚ್ಚರಿಕೆ!

ಶಿವಮೊಗ್ಗ (shivamogga), ಜೂ. 13: ಶಿವಮೊಗ್ಗ ಮಹಾನಗರ ಪಾಲಿಕೆಯ (shimoga city corporation) ಆಯುಕ್ತರು ವಿವಿಧ ಕ್ಷೇತ್ರಗಳಿಗೆ ಬೇಟಿ ನೀಡಿದ ಸಂದರ್ಭ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಹಂದಿಗಳನ್ನು (pigs) ಸಾಕುತ್ತಿರುವ ಮಾಲೀಕರು ವಿರುದ್ಧ ದೂರನ್ನು ಸ್ವೀಕರಿಸಿರುತ್ತಾರೆ. 

ಹಂದಿಗಳಿಂದ ಅನೈರ್ಮಲ್ಯತೆ, ಪರಿಸರ ಮಾಲಿನ್ಯ, ಹಂದಿ ಜ್ವರ ಮತ್ತು ಮೆದುಳು ಜ್ವರದಂತಹ  ರೋಗಗಳು ಹರಡುವ ಸಾಧ್ಯತೆ ಇರುತ್ತದೆ.  ಈ ಹಿಂದೆ ಹಂದಿ ಸಾಕಾಣಿಕೆದಾರರಿಗೆ (Pig farmers) ಪರ್ಯಾಯವಾಗಿ ಸಹಾಯಧನ ಮತ್ತು ಮನೆ ಮನೆ ಕಸ ಸಂಗ್ರಹಣೆಯ ಕೆಲಸವನ್ನು ನೀಡಿ ಕಡ್ಡಾಯವಾಗಿ ಹಂದಿ ಸಾಕಾಣಿಕೆ ಮಾಡಬಾರದೆಂದು ನಿರ್ದೇಶಿಸಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಪಾಲಿಕೆಯ ವ್ಯಾಪ್ತಿಯಲ್ಲಿ ಆಯುಕ್ತರ ಅನುಮತಿ ಇಲ್ಲದೆ ಹಂದಿಗಳನ್ನು ಸಾಕುತ್ತಿರುವುದು ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976 ಕಲಂ 344 ಮತ್ತು  345 ರನ್ವಯ ಕಾನೂನು ಬಾಹಿರವಾಗಿದೆ.

ಈ ಹಿಂದೆ ಕಛೇರಿಯಿಂದ ಅನೇಕ ಬಾರಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ ತಿಳುವಳಿಕೆ ನೀಡಲಾಗಿದ್ದರೂ ಸಹಾ ಹಂದಿ  ಮಾಲೀಕರು ಯಾವುದೇ ರೀತಿಯ ಕ್ರಮವಹಿಸಿರುವುದಿಲ್ಲ.  ಆದ್ದರಿಂದ ಎಲ್ಲಾ ಹಂದಿ ಸಾಕಾಣಿಕೆದಾರರು ನಗರ ವ್ಯಾಪ್ತಿಯಲ್ಲಿ ಹಂದಿಗಳನ್ನು ಸಾಕಿದ್ದಲ್ಲಿ ತಮ್ಮ ಎಲ್ಲಾ ಹಂದಿಗಳನ್ನು 3 ದಿನಗೊಳಗೆ ಖಾಲಿ ಮಾಡತಕ್ಕದ್ದು.

ತಪ್ಪಿದ್ದಲ್ಲಿ ನಗರ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ಬಿಡಾಡಿ ಹಂದಿಗಳೆಂದು ಪರಿಗಣಿಸಿ ಸಾರ್ವಜನಿಕರ ಹಿತಾಸಕ್ತಿಯ ಮೇರೆಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇದರಿಂದ ಆಗುವ ಯಾವುದೇ ನಷ್ಟಕ್ಕೆ ಪಾಲಿಕೆ ಜವಾಬ್ದಾರರಲ್ಲ  ಎಂದು ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. 

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *