ಮುಂದುವರಿದ ಲೋಕಾಯುಕ್ತ ತಂಡದ ತಪಾಸಣೆ : ಶಿವಮೊಗ್ಗ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ!

Continued Lokayukta team's inspection: A surprise visit to Shimoga sub registrar's office! ಮುಂದುವರಿದ ಲೋಕಾಯುಕ್ತ ತಂಡದ ತಪಾಸಣೆ ಶಿವಮೊಗ್ಗ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ

ಶಿವಮೊಗ್ಗ (shivamogga), ಜೂ. 25: ಇತ್ತೀಚೆಗೆ ಲೋಕಾಯುಕ್ತ ಪೊಲೀಸರು (lokayukta police team) ಶಿವಮೊಗ್ಗದ ಸ್ಮಾರ್ಟ್ ಸಿಟಿ (smart city) ಕಾಮಗಾರಿ ಪರಿಶೀಲಿಸಿ, ಅಕ್ರಮದ ಬಗ್ಗೆ ಮಾಹಿತಿ ಕೇಳಿದ್ದರು. ಇದರ ಬೆನ್ನಲ್ಲೇ, ಶಿವಮೊಗ್ಗದ ಸರ್ಕಾರಿ ಕಚೇರಿಯೊಂದಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ವಿನೋಬನಗರದಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ (sub registrar office) ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ ಎಂ ಹೆಚ್ ನೇತೃತ್ವದ ತಂಡ ದಿಢೀರ್ ಭೇಟಿ (sudden visit) ನೀಡಿತ್ತು. ಅಲ್ಲಿನ ಕೆಲಸ ಕಾರ್ಯಗಳ ಖುದ್ದು ಪರಿಶೀಲನೆ ನಡೆಸಿತು.

ಕಚೇರಿಯಲ್ಲಿ (office) ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಮತ್ತು ಹೊರ ಗುತ್ತಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್‍ ಗಳ ಸಮಗ್ರ ಮಾಹಿತಿಯ ಜೊತೆಗೆ ಕಾರ್ಯನಿರ್ವಹಣೆಯ ವಿವರ ಕಲೆ ಹಾಕಿದ್ದಾರೆ.

ಹಾಗೆಯೇ ಸಿಬ್ಬಂದಿಗಳ ಹಾಜರಾತಿ ಪುಸ್ತಕ (attendance book), ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‍ ಗಳನ್ನು ಪರಿಶೀಲಿಸಿದ್ದಾರೆ. ಇದೆ ವೇಳೆ ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರೊಂದಿಗೆ (publics) ಲೋಕಾಯುಕ್ತ ತಂಡ ಸಮಾಲೋಚನೆ ನಡೆಸಿದೆ.

ಪರಿಶೀಲನಾ ಸಮಯದಲ್ಲಿ ಕಚೇರಿಯಲ್ಲಿ ಕಂಡು ಬಂದ ನ್ಯೂನ್ಯತೆಗಳ (deficiency) ಕುರಿತು ಹಿರಿಯ ಉಪನೋಂದಣಾಧಿಕಾರಿ ಧನರಾಜ್ ಮತ್ತು ದಿನೇಶ್ ರವರಿಗೆ ತಿಳಿಸಿ, ಸ್ಥಳದಲ್ಲಿಯೇ ಸಲಹೆ – ಸೂಚನೆಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಡಿಎಸ್‍ಪಿ ಉಮೇಶ್ ಈಶ್ವರನಾಯ್ಕ್, ಪೊಲೀಸ್ ನಿರೀಕ್ಷಕ ಪ್ರಕಾಶ್ ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *