ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತ : ನಾಗರೀಕರ ಪ್ರತಿಭಟನೆ

Increasing number of accidents on Shimoga's bypass road: Citizens protest ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತ : ನಾಗರೀಕರ ಪ್ರತಿಭಟನೆ

ಶಿವಮೊಗ್ಗ (shivamogga), ಜೂ. 27: ಶಿವಮೊಗ್ಗ ನಗರದ (shimoga city) ಹೊರವಲಯ ಸೂಳೈಬೈಲು ಬಡಾವಣೆ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ (national highway) ಬೈಪಾಸ್ ರಸ್ತೆಯಲ್ಲಿ (bypass road) ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಮಾಯಕರು ಸಾವು – ನೋವಿಗೆ ತುತ್ತಾಗುತ್ತಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಈ ಸಂಬಂಧ ಗುರುವಾರ ಬಡಾವಣೆಯ ವೃತ್ತದಲ್ಲಿ ನಿವಾಸಿಗಳು ಪ್ರತಿಭಟನೆ (protest) ನಡೆಸಿದರು. ಅಪಘಾತಗಳ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಸಂಬಂಧಿಸಿದ ಇಲಾಖೆಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕಾಗಮಿಸಿದ ರಾಷ್ಟ್ರೀಯ ಹೆದ್ಧಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಿದರು.

ಪ್ರತಿನಿತ್ಯ ರಸ್ತೆಯಲ್ಲಿ ಸಾವಿರಾರು ವಾಹನಗಳು (vehicles) ಸಂಚರಿಸುತ್ತವೆ. ಜೊತೆಗೆ ಅಪಘಾತಗಳು (accidents) ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳ ನಿಯಂತ್ರಣ ಉದ್ಧೇಶದಿಂದ ವೈಜ್ಞಾನಿಕ ರೀತಿಯಲ್ಲಿ ಹಂಪ್ಸ್ ಅಳವಡಿಸಬೇಕು. ರಸ್ತೆಯ ಇಕ್ಕೆಲಗಳಲ್ಲಿ ಬೀದಿ ದೀಪಗಳ (street lights) ವ್ಯವಸ್ಥೆ ಮಾಡುವುದು ಸೇರಿದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಅಬ್ದುಲ್ ರಹೀಂ, ಸನಾವುಲ್ಲಾ, ಇಮ್ರಾನ್, ನ್ಯಾಮತ್, ಮುಜ್ಜು, ಸಲೀಂ, ನವಾಜ್, ಯಾಸೀನ್ ಸೇರಿದಂತೆ ಮೊದಲಾದವರಿದ್ದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →