ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ : ಸಿ.ಎಂ.ಸಿದ್ದರಾಮಯ್ಯ cm siddaramaiah

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ : ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು, ಜು. 1: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 

ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು. 

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್,  ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

Union Minister HD Kumaraswamy visits Bhadravathi VISL factory ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ Previous post ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ
Request for Talaguppa-Shirasi-Hubli railway line Appeal for Yesvantpur-Shivamogga Vande Bharat train MP B. Y. Raghavendra consultation with Railway Minister in Delhi ತಾಳಗುಪ್ಪ–ಶಿರಸಿ–ಹುಬ್ಬಳ್ಳಿ ರೈಲ್ವೆ ಮಾರ್ಗಕ್ಕೆ ಕೋರಿಕೆ ಯಶವಂತಪುರ–ಶಿವಮೊಗ್ಗ ವಂದೇ ಭಾರತ್ ರೈಲಿಗೆ ಮನವಿ ದೆಹಲಿಯಲ್ಲಿ ರೈಲ್ವೆ ಸಚಿವರೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಸಮಾಲೋಚನೆ Next post ತಾಳಗುಪ್ಪ–ಶಿರಸಿ–ಹುಬ್ಬಳ್ಳಿ ರೈಲ್ವೆ ಮಾರ್ಗಕ್ಕೆ ಕೋರಿಕೆ