ಶಿವಮೊಗ್ಗ ನಗರದಲ್ಲಿ ಸಂಚಾರ ಅಸ್ತವ್ಯಸ್ತ : ಹಲವೆಡೆ ಟ್ರಾಫಿಕ್ ಜಾಮ್!!

ಶಿವಮೊಗ್ಗ, ಫೆ. 27: ಶಿವಮೊಗ್ಗ ನಗರದ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಜನರು ವಿವಿಧ ವಾಹನಗಳಲ್ಲಿ ಆಗಮಿಸುತ್ತಿದ್ದಾರೆ.
ಇದರಿಂದ ಸೋಮವಾರ ಬೆಳಿಗ್ಗೆ ನಗರದ ಹಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಂಡುಬಂದಿದೆ. ಟ್ರಾಫಿಕ್ ಜಾಮ್ ಏರ್ಪಟ್ಟಿದೆ, ಸಮಾವೇಢಶಕ್ಕೆ ತೆರಳುವ ವಾಹನಗಳ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಬಿದ್ದಿರುವುದು ಕಂಡುಬರುತ್ತಿದೆ.
ನ್ಯೂಮಂಡ್ಲಿ  ಗೋಪಾಳದ ರಸ್ತೆಯಲ್ಲಿ ಕಿ.ಮೀ. ಉದ್ದದ ವಾಹನ ದಟ್ಟಣೆ ಕಂಡುಬಂದಿತು. ಬೆಳಿಗ್ಗೆ ವಿವಿಧ ಕೆಲಸಕಾರ್ಯಗಳಿಗೆ ತೆರಳುವವರು ಟ್ರಾಫಿಕ್ ಜಾಮ್ ಗಳಲ್ಲಿ ಸಿಲುಕಿ ತೀವ್ರ ಸಂಕಷ್ಟ ಪಡುವಂತಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →