ಶಿವಮೊಗ್ಗ : ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ!

shimoga: A car collided with an electric pole on the side of the road! ಶಿವಮೊಗ್ಗ : ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ!

ಶಿವಮೊಗ್ಗ, ಜು. 7: ರಸ್ತೆ ಬದಿ ವಿದ್ಯುತ್ ಕಂಬಕ್ಕೆ (electric pole) ಕಾರೊಂದು ಡಿಕ್ಕಿ ಹೊಡೆದ ಘಟನೆ ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ, ಆಲ್ಕೋಳದ (alkola) ಭಾರತೀಯ ಆಹಾರ ನಿಗಮ (fci) ಕಚೇರಿ ಎದುರಿನ 100 ಅಡಿ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು (car) ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಅನಾಹುತದಿಂದ ಪಾರಾಗಿದ್ದಾರೆ. ಅವಘಡದ ನಂತರ ವಿದ್ಯುತ್ ಸಂಪರ್ಕ (electrical connection) ಕಡಿತಗೊಂಡಿದ್ದರಿಂದ ಸಂಭಾವ್ಯ ಅನಾಹುತವೊಂದು ತಪ್ಪಿದಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ.

ವಿದ್ಯುತ್ ಕಂಬ  ರಸ್ತೆಗೆ ವಾಲಿಕೊಂಡಿರುವುದರಿಂದ, ಸದರಿ ರಸ್ತೆಯಲ್ಲಿ ವಾಹನ ಸಂಚಾರ (vehicular traffic) ನಿರ್ಬಂಧಿಸಲಾಗಿದೆ. ಮತ್ತೊಂದು ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ (mescom) ಅಧಿಕಾರಿಗಳು, ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲಿಸಿದ್ದಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →