ಜೋಗ : ಜಲಧಾರೆಯ ವೈಭೋಗ – ಮೈದುಂಬಿ ಹರಿಯುತ್ತಿರುವ ಜಲಪಾತ!

Joga : Enjoyment of water flow : Flowing waterfall! ಜೋಗ : ಜಲಧಾರೆಯ ವೈಭೋಗ : ಮೈದುಂಬಿ ಹರಿಯುತ್ತಿರುವ ಜಲಪಾತ

ಜೋಗಫಾಲ್ಸ್, ಜು. 8: ಮುಂಗಾರು ಮಳೆ (monsoon rain) ಮಲೆನಾಡಿಗೆ ಹೊಸ ಕಳೆ ತಂದಿದೆ. ಸುಡು ಬಿಸಿಲಿಗೆ ಬತ್ತಿ ಹೋಗಿದ್ದ ನದಿ, ತೊರೆ, ಕೆರೆಕಟ್ಟೆಗಳಿಗೆ ಜೀವಕಳೆ ಬಂದಿದೆ. ಜಲಪಾತಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಅದರಲ್ಲಿಯೂ ವಿಶ್ವವಿಖ್ಯಾತ ಜೋಗ ಜಲಪಾತ (jogfalls) ಜಲಧಾರೆಯಿಂದ ಧುಮ್ಮಿಕ್ಕಿ ಹರಿಯಲಾರಂಭಿಸಿದೆ. ಮತ್ತೆ ಭೋರ್ಗರೆಯಲಾರಂಭಿಸಿದೆ.

ಶರಾವತಿ ಕಣಿವೆ (sharavathi valley) ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ (heavy rainfall). ಇದರಿಂದ ಜೋಗ ಜಲಪಾತ (jogfalls) ಮತ್ತೆ ಹಳೇಯ ವೈಭವಕ್ಕೆ ಮರಳಲಾರಂಭಿಸಿದೆ. ‘ಇರುವುದರೊಳಗೆ ಒಮ್ಮೆ ನೋಡು ಜೋಗದ ಗುಂಡಿ…’ ಎಂಬ ಕವಿವಾಣಿ ಪ್ರಸ್ತುತ ಅಕ್ಷರಶಃ ಸತ್ಯವಾಗಿದೆ!

ಜಲಧಾರೆಯ ವೈಭೋಗವು ಪ್ರವಾಸಿಗರ (tourists) ಕಣ್ಮನ ಸೆಳೆಯುತ್ತಿದೆ. ಕ್ಷೀರ ಸಾಗರದಂತೆ ಬೀಳುವ ಜಲಧಾರೆ, ಸುತ್ತಲಿನ ಹಸಿರು, ಆಗಾಗ್ಗೆ ಜಲಪಾತ (falls) ಮುಚ್ಚಿಕೊಳ್ಳುವ ಇಬ್ಬನಿ, ಇದರ ಜೋತೆ ಮಳೆಯ ಹನಿ ಪ್ರವಾಸಿಗರನ್ನು ರೋಮಾಂಚನಗೊಳಿಸುತ್ತಿದೆ.

ಆಗಾಗ್ಗೆ ಬೀಳುವ ಮಳೆ, ಮಂಜು ಮುಸುಕಿದ ವಾತಾವರಣ, ಹಚ್ಚ ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುವ ಜಲಧಾರೆಯ ಸೊಬಗು  ಪ್ರವಾಸಿಗರ ಮನಸೂರೆಗೊಳ್ಳುತ್ತಿದೆ. ದಿನದಿಂದ ದಿನಕ್ಕೆ ಜೋಗದ ಜಲಧಾರೆಯ ವೈಭೋಗ ಕಣ್ತುಂಬಿಕೊಳ್ಳಲು ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇದೆಲ್ಲದರ ನಡುವೆ ಜೋಗ ಜಲಪಾತದ ಬಳಿ ವಿವಿಧ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿವೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →