Sharavati river water to 354 villages around Soraba Shiralakoppa Anavatti ಸೊರಬ ಶಿರಾಳಕೊಪ್ಪ ಆನವಟ್ಟಿ ಸುತ್ತಮುತ್ತಲಿನ 354 ಗ್ರಾಮಗಳಿಗೆ ಶರಾವತಿ ನದಿ ನೀರು minister Madhu Bangarappa statement ಸಚಿವ ಮಧು ಬಂಗಾರಪ್ಪ ಹೇಳಿಕೆ

ಸೊರಬ ಶಿರಾಳಕೊಪ್ಪ ಆನವಟ್ಟಿ ಸುತ್ತಮುತ್ತಲಿನ 354 ಗ್ರಾಮಗಳಿಗೆ ಶರಾವತಿ ನದಿ ನೀರು  : ಸಚಿವ ಮಧು ಬಂಗಾರಪ್ಪ ಹೇಳಿಕೆ

ಸೊರಬ (soraba), ಜು. 13: ಸೊರಬ, ಶಿರಾಳಕೊಪ್ಪ (shiralakoppa) ಮತ್ತು ಆನವಟ್ಟಿ (anavatti) ಸುತ್ತಮುತ್ತಲ ಪ್ರದೇಶಗಳ 354 ಗ್ರಾಮಗಳ (villages) ನಿವಾಸಿಗಳಿಗೆ  ಶರಾವತಿ ನದಿಯಿಂದ (sharavathi river) ಶುದ್ಧ ಕುಡಿಯುವ ನೀರು ಒದಗಿಸಲು  ಸುಮಾರು 600 ಕೋಟಿ ರೂ ವೆಚ್ಚದ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಶೀಘ್ರದಲ್ಲಿಯೇ ಯೋಜನೆ ಅನುಷ್ಠಾನಗೊಳ್ಳುವ ನಿರೀಕ್ಷೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (district incharge minister) ತಿಳಿಸಿದ್ದಾರೆ. 

ಅವರು ಇಂದು ಸೊರಬ ಪಟ್ಟಣದಲ್ಲಿ (soraba town) ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಮುಂದಿನ ಒಂದು ತಿಂಗಳಲ್ಲಿ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು.

ಸೊರಬ ತಾಲೂಕಿನ ವರದಾ ನದಿಗೆ (varada river) ಬ್ಯಾರೇಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 62 ಕೋಟಿ  ರೂಪಾಯಿ ಮಂಜೂರಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ಶಾಲಾ ಮಕ್ಕಳಿಗೆ ವಾರದ ಎರಡು ದಿನ  ನೀಡಲಾಗುತ್ತಿದ್ದ ಮೊಟ್ಟೆಯನ್ನು (egg) ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ (Azim Prem Ji Foundation) ಸಹಯೋಗದೊಂದಿಗೆ ಮುಂದಿನ ಮೂರು ವರ್ಷಗಳವರೆಗೆ ವಾರದ ಆರು ದಿನಗಳ ಕಾಲ ಮೊಟ್ಟೆ ವಿತರಿಸುವ ಕಾರ್ಯಕ್ಕೆ  ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಸರ್ಕಾರ 1500 ಕೋಟಿ ರೂ. ಹೆಚ್ಚುವರಿ ವೆಚ್ಕ ಭರಿಸಲಿದೆ ಎಂದು ಮಾಹಿತಿ ನೀಡಿದರು.

ಅಲ್ಲದೆ ಶಾಲಾ ಮಕ್ಕಳ ಆರೋಗ್ಯ  ಕಾಪಾಡುವ ನಿಟ್ಟಿನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ ಸರಬರಾಜು ಮಾಡಲು ಉದ್ದೇಶಿಸಿದ್ದು  ಪ್ರತಿ ದಿನ ಬೆಳಿಗ್ಗೆ 55 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್ (Millet malt) ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ (shimoga distrct) ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಸಹಕಾರಿಯಾಗುವಂತೆ ವಿವಿಧ ಸ್ಥಳಗಳಲ್ಲಿ ವಿದ್ಯುತ್ ಉಪ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಅಲ್ಲದೆ ಕೃಷಿ  ಚಟುವಟಿಕೆಗಳಿಗೆ ಸೋಲಾರ್ ಬಳಕೆಗೆ ಉತ್ತೇಜನ ನೀಡಲು  ವಿಶೇಷ ಗಮನಹರಿಸಲಾಗುವುದು. ಅರಣ್ಯದಂಚಿನಲ್ಲಿ ವಾಸಿಸುವ ವನವಾಸಿಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಕ್ರಮವಹಿಸಲಾಗಿದೆ ಯಾರನ್ನು ಒಕ್ಕಲಿಬ್ಬಿಸುವ ಉದ್ದೇಶ ಸರ್ಕಾರದ ಮುಂದಿಲ್ಲ.  ಹೊಸದಾಗಿ ಅರಣ್ಯ ಭೂಮಿ ಒತ್ತುವರಿ ಮಾಡುವವರನ್ನು ಸರ್ಕಾರ ಪುರಸ್ಕರಿಸಲಾಗದು ಎಂದರು.

ವಿಮಾನ ನಿಲ್ದಾಣದಲ್ಲಿ (shivamogga airport) ಬಾಕಿ ಇರುವ ಕಾಮಗಾರಿಗಳನ್ನು ಸರ್ಕಾರದ ವತಿಯಿಂದ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಸೊರಬ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು,  ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು

The plane did not land in Shimoga : Home Minister returned to Bangalore! ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು! Previous post ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು!
Chennai-Shivamoga train service started ಚೆನ್ನೈ – ಶಿವಮೊಗ್ಗ ರೈಲು ಸಂಚಾರಕ್ಕೆ ಚಾಲನೆ Next post ಚೆನ್ನೈ – ಶಿವಮೊಗ್ಗ ರೈಲು ಸಂಚಾರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ