ಪ್ರವಾಹ ಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

District In-charge Minister Madhu Bangarappa visited the flood affected areas of Shimoga district ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ

ಸಾಗರ / ಹೊಸನಗರ, ಜು. 21: ಭಾರೀ ಮಳೆಯಿಂದ (heavy rainfall) ಹಾನಿಗೀಡಾದ ಸಾಗರ (sagar), ಹೊಸನಗರ (hosanagar) ತಾಲೂಕಿನ ವಿವಿಧ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (district incharge minister madhu bangarappa) ಅವರು ಅಧಿಕಾರಿಗಳ ತಂಡದೊಂದಿಗೆ ಭಾನುವಾರ ಭೇಟಿಯಿತ್ತು ಪರಿಶೀಲನೆ ನಡೆಸಿದರು.

ನೆರೆ ಪೀಡಿತ (flood affected) ಸ್ಥಳಗಳಿಗೆ ಸಚಿವರು ಭೇಟಿ ನೀಡಿ ಜಲಾವೃತಗೊಂಡ ಕೃಷಿ ಜಮೀನು ಹಾಗೂ ಮಳೆಯಿಂದ ಹಾನಿಗೀಡಾದ ಕಟ್ಟಡಗಳ ವೀಕ್ಷಣೆ ಮಾಡಿ, ಸ್ಥಳೀಯರ ಅಹವಾಲುಗಳನ್ನು ಆಲಿಸಿದರು. ಈ ಎರಡು ತಾಲೂಕುಗಳ ಭೇಟಿಯ ನಂತರ, ತೀರ್ಥಹಳ್ಳಿ (thirthahalli) ತಾಲೂಕಿನ ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವರು ಭೇಟಿ ನೀಡಲು ತೆರಳಿದರು.

ಈ ವೇಳೆ ಸಾಗರದಲ್ಲಿ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು. ವರದಾ ನದಿ (varada river) ಉಕ್ಕಿ ಹರಿಯುತ್ತಿರುವುದರಿಂದ ಹಲವೆಡೆ  ಕೃಷಿ ಭೂಮಿಗಳು ಜಲಾವೃತವಾಗಿವೆ. ಜಲಾವೃತ ಸ್ಥಿತಿ ತಪ್ಪಿಸಲು 6 ಕಡೆ ಬ್ಯಾರೇಜ್ (barrage) ನಿರ್ಮಾಣಕ್ಕೆ 53 ಕೋಟಿ ರೂ. ಮಂಜೂರಾಗಿದೆ. ಮಳೆಗಾಲ (rainy season) ಪೂರ್ಣಗೊಂಡ ನಂತರ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಮಳೆ ಸಂಬಂಧಿತ ಘಟನೆಗಳಲ್ಲಿ (rain related incidents) ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →