ಜಮೀನಿನಲ್ಲಿ ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು!

A leopard died after getting caught in a trap that was used to catch a wild boar in the farm! ಜಮೀನಿನಲ್ಲಿ ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು!

ಸೊರಬ (sorab), ಜು. 24: ಕಾಡು ಹಂದಿ ಹಿಡಿಯಲು ಜಮೀನೊಂದರಲ್ಲಿ ಹಾಕಿದ್ದ ಉರುಳಿಗೆ ಸಿಲುಕಿ, ಚಿರತೆಯೊಂದು (leopard) ಮೃತಪಟ್ಟ ಘಟನೆ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ಬುಧವಾರ ನಡೆದಿದೆ. 

ಚಿರತೆ ಉರುಳಿಗೆ ಸಿಲುಕಿ ಕೂಗುವುದನ್ನು ಗಮನಿಸಿದ ಗ್ರಾಮಸ್ಥರೋರ್ವರು, ಅರಣ್ಯ ಇಲಾಖೆಗೆ (forest dept) ಮಾಹಿತಿ ನೀಡಿದ್ದರು. ಸ್ಥಳಕ್ಕೆ ಶಿವಮೊಗ್ಗದಿಂದ (shivamogga) ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಮೃತಪಟ್ಟಿದೆ. 

ಜಮೀನಿನೊಂದರ ತಂತಿ ಬೇಲಿಗೆ, ಕಾಡು ಹಂದಿ‌ (wild boar) ಹಿಡಿಯುವ ಉದ್ದೇಶದಿಂದ ಉರುಳು ಹಾಕಲಾಗಿತ್ತು. ಮೃತ ಚಿರತೆಗೆ ಸುಮಾರು 4 ವರ್ಷ ವಯೋಮಾನವಿದ್ದು, ಗಂಡು ಚಿರತೆಯಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಜಮೀನಿನ ಮಾಲೀಕನ ವಿರುದ್ದ ಅರಣ್ಯ ಇಲಾಖೆಯು ಪ್ರಕರಣ ದಾಖಲಿಸಿಕೊಂಡಿದೆ. ಜೊತೆಗೆ ಮೃತ ಚಿರತೆಯನ್ನು ನ್ಯಾಯಾಲಯದ ಅನುಮತಿ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಕ್ರಿಯೆ ನಡೆಸಿದೆ.

ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಎಲ್. ಪರಶುರಾಮ್, ಉಪ ವಲಯ  ಅರಣ್ಯಾಧಿಕಾರಿಗಳಾದ ಜಿ. ಪರಶುರಾಮ್, ರಾಮಪ್ಪ, ಗಸ್ತು ಅರಣ್ಯಪಾಲಕರಾದ ಹರೀಶ್, ಆನಂದ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →