ಭಾರೀ ಮಳೆಗೆ ಭದ್ರಾ ಡ್ಯಾಂ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ : ಜು. 26 ರಂದು ಹೊಸನಗರ, ಸಾಗರ, ತೀರ್ಥಹಳ್ಳಿ  ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ!

Further increase in Bhadra Dam inflow due to heavy rain : Holiday announcement for schools and colleges of Hosnagar Sagar Tirthahalli taluk on 26th! ಭಾರೀ ಮಳೆಗೆ ಭದ್ರಾ ಡ್ಯಾಂ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ : ಜು. 26 ರಂದು ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ!

ಶಿವಮೊಗ್ಗ (shivamogga), ಜು. 26: ಮಲೆನಾಡಿನಲ್ಲಿ (malnad) ಕಳೆದೆರೆಡು ದಿನಗಳಿಂದ ಭಾರೀ ಮಳೆ (heavy rainfall) ಮುಂದುವರಿದಿದೆ. ಮತ್ತೆ ಕೆರೆಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿ ನಿರಂತರವಾಗಿ ಏರಿಕೆ ಕಂಡುಬರಲಾರಂಭಿಸಿದೆ.

ಶುಕ್ರವಾರ ಬೆಳಿಗ್ಗೆಯ ಮಾಹಿತಿಯಂತೆ, ಮಧ್ಯ ಕರ್ನಾಟಕದ ಪ್ರಮುಖ ಜಲಾಶಯವಾದ ಭದ್ರಾ ಡ್ಯಾಂನ (bhadra dam) ಒಳಹರಿವು 35,318 ಕ್ಯೂಸೆಕ್ ಗೆ ಏರಿಕೆಯಾಗಿದೆ. 202 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಗುರುವಾರ ಡ್ಯಾಂನ ಒಳಹರಿವು (inflow) 26,044 ಕ್ಯೂಸೆಕ್ ಇತ್ತು.

ಡ್ಯಾಂನ ನೀರಿನ ಮಟ್ಟ (bhadra dam water level) 174 ಅಡಿ 3 ಇಂಚು (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 155. 3 ಅಡಿಯಿತ್ತು. ಕಳೆದ ವರ್ಷ ಇದೇ ದಿನಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ ಡ್ಯಾಂನಲ್ಲಿ ಸರಿಸುಮಾರು 19 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.

ಜಲಾನಯನ ಪ್ರದೇಶ (catchment areas) ವ್ಯಾಪ್ತಿಯಲ್ಲಿ ಶುಕ್ರವಾರ ಕೂಡ ಭಾರೀ ಮಳೆ (heavy to heavy rainfall) ಮುಂದುವರಿದಿದೆ. ಇದರಿಂದ ಡ್ಯಾಂನ (dam) ಒಳಹರಿವಿನಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಇದೇ ರೀತಿ ಮಳೆ ಮುಂದುವರಿದರೆ ಶೀಘ್ರದಲ್ಲಿಯೇ ಭದ್ರಾ ಜಲಾಶಯ ಗರಿಷ್ಠ ಮಟ್ಟಕ್ಕೆ ತಲುಪುವ ಸಾಧ್ಯತೆಯಿದೆ.

ರಜೆ ಘೋಷಣೆ : ಶಿವಮೊಗ್ಗ ಜಿಲ್ಲೆಯ ಹೊಸನಗರ (hosanagara), ಸಾಗರ (sagar) ಹಾಗೂ ತೀರ್ಥಹಳ್ಳಿ (thirthahalli) ತಾಲೂಕಿನಾದ್ಯಂತ ಮಳೆಯ ಆರ್ಭಟ ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜು. 26 ರ ಶುಕ್ರವಾರ ಈ ಮೂರು ತಾಲೂಕಿನಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೊಷಣೆ (Holiday declaration for schools and colleges) ಮಾಡಿ ಅಲ್ಲಿನ ತಾಲೂಕು ಆಡಳಿತಗಳು ಆದೇಶ ಹೊರಡಿಸಿವೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →