ಮಲೇರಿಯಾ, ಕ್ಷಯ, ಅನಿಮೀಯ ಮುಕ್ತ ಭಾರತಕ್ಕೆ ಪಣ – ಜಿ.ವಿಜಯಕುಮಾರ್

ಶಿವಮೊಗ್ಗ, ಮಾ. 1: ಮುಂದಿನ 2025ಕ್ಕೆ ಮಲೇರಿಯಾ, ಕ್ಷಯ ಹಾಗೂ ಅನಿಮಿಯ ಮುಕ್ತ ಭಾರತಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳ ನೆರವು ಅತ್ಯಂತ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್ ಹೇಳಿದರು.

ಶಿವಮೊಗ್ಗ ನಗರದಲ್ಲಿರುವ ಸ್ಕೌಟ್ ಭವನದಲ್ಲಿ ವಿವಿಧ ಪ್ರೌಢಶಾಲೆಯ ಗೈಡ್ಸ್ ಮಕ್ಕಳಿಗೆ ಇಂದು ಆಯೋಜಿಸಿದ್ದ ಉಚಿತ ಆರೋಗ್ಯ ಮಾಹಿತಿ ಹಾಗೂ ಜಂತುಹುಳ ನಿವರಣಾ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅದ್ಭುತ ಯೋಜನೆ ಸಾಕಾರಕ್ಕೆ ಎಲ್ಲರ ಪಾಲ್ಗೊಳ್ಳುವಿಕೆ ಮುಖ್ಯ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನೀರಿಕ್ಷಕ ಎಂ.ಎ.ಅತ್ತರ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರಾಮುಖ್ಯತೆ ನೀಡಬೇಕು. ಆರೋಗ್ಯ ಸದೃಢವಾಗಿದ್ದರೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸಲು ಸಹಕಾರಿ ಆಗುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದರು.

ಅನಿಮಿಯದಿಂದ ಸಾಕಷ್ಟು ಜನರು ತೊಂದರೆಗೆ ಒಳಗಾಗುತ್ತಿದ್ದಾರೆ. ಅಸಾಂಕ್ರಾಮಿಕ ರೋಗಗಳಿಗೆ ಹೃದಯಾಘಾತ, ಕಿಡ್ನಿ ವೈಫಲ್ಯ, ದೃಷ್ಠಿ ಹೀನತೆ, ಗ್ಯಾಂಗ್ರೀನ್, ರೋಗನಿರೋಧಕ ಶಕ್ತಿ ಕುಂದುವುದು, ಲೈಂಗಿಕ ದೌರ್ಬಲ್ಯ ಉಂಟಾಗಬಹುದು ಎಂದು ತಿಳಿಸಿದರು.

ತಾಲೂಕು ಹಿರಿಯ ಆರೋಗ್ಯ ನೀರಿಕ್ಷಕ ಎಸ್,ಆರ್.ಮಂಜುನಾಥ್ ಮಾತನಾಡಿ, ಕುಷ್ಠರೋಗದ ಅರಿವು ಮತ್ತು ಕ್ಷಯರೋಗದ ಲಕ್ಷಣಗಳು, ಪರಿಹಾರದ ಬಗ್ಗೆ ಮಕ್ಕಳಿಗೆ ಸವಿಸ್ತಾರವಾಗಿ ತಿಳಿಸಿದರು. ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಮಾತನಾಡಿ, ಪ್ರತಿ ವರ್ಷ ಆರೋಗ್ಯ ಇಲಾಖೆಯ ಸೇವೆ ನಾವು ಮರೆಯುವಂತಿಲ್ಲ. ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಸಹಕಾರ ನೀಡುತ್ತ ಬಂದಿದ್ದಾರೆ ಎಂದು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳಿಗೆ ಕಬ್ಬಿಣಾಂಶ ಇರುವ ಮಾತ್ರೆಗಳನ್ನು ವಿತರಿಸಲಾಯಿತು. ಜಂತುಹುಳ ನಿವಾರಣಾ ಮಾತ್ರೆಗಳನ್ನು ವಿತರಿಸಲಾಯಿತು. ಸಮಾರಂಭದಲ್ಲಿ ರಾಜ್ಯ ಸಂಘಟನಾ ಆಯುಕ್ತ ಭಾರತಿ ಡಯಾಸ್, ಜಿ.ವಿಜಯ್‌ಕುಮಾರ್, ಮಂಜುನಾಥ, ಅತ್ತರ್, ದೇವಪ್ಪ, ರುಕ್ಸಾನಾ, ಭರತ್ ಹಾಗೂ ವಿವಿಧ ಶಾಲೆಯಿಂದ ಆಗಮಿಸಿದ್ದ ಮಕ್ಕಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *