ಜೋಗ ಜಲಪಾತಕ್ಕೆ ಮುಂದುವರಿದ ಜನಸಾಗರ…!

monsoon rain - continued crowd to Joga falls...! ಜೋಗ ಜಲಪಾತಕ್ಕೆ ಮುಂದುವರಿದ ಜನಸಾಗರ…!

ಜೋಗಫಾಲ್ಸ್ (jogfalls), ಜು. 28: ಮುಂಗಾರು ಮಳೆಗೆ (monsoon rain) ಮೈದುಂಬಿಕೊಂಡಿರುವ, ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜನಸಾಗರ ಮುಂದುವರಿದಿದೆ. ಜು. 28 ರ ಭಾನುವಾರ ಕೂಡ. ಸಾವಿರಾರು ಸಂಖ್ಯೆಯ ಪ್ರವಾಸಿಗರು (tourists) ಜಲಪಾತದ ಜಲಧಾರೆಯ ವೈಭೋಗ ವೀಕ್ಷಣೆಗೆ ವಿವಿಧೆಡೆಯಿಂದ ದೌಡಾಯಿಸಿದ್ದರು.

ಕಳೆದ ಕೆಲ ದಿನಗಳಿಂದ ಜಲಪಾತದ ಸುತ್ತಮುತ್ತ ಭಾರೀ ಮಳೆಯಾಗುತ್ತಿತ್ತು (heavy rainfall). ಇದರಿಂದ ಮಂಜು ಮುಸುಕಿದ ವಾತಾವರಣ ಆವರಿಸಿತ್ತು. ಆದರೆ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು. ಇದರಿಂದ ಜಲಪಾತ (falls) ವೀಕ್ಷಣೆ ಮಾಡಲು ಪ್ರವಾಸಿಗರಿಗೆ ಸಾಕಷ್ಟು ಅನುಕೂಲವಾಗಿತ್ತು.

ಶರಾವತಿ ಕಣಿವೆ (sharavati valley) ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ, ಜೋಗ ಜಲಪಾತ (jog falls) ಭೋರ್ಗರೆಯಲಾರಂಭಿಸಿದೆ. ಕಳೆದ ಹಲವು ವಾರಗಳಿಂದ ಸಾವಿರಾರು ಸಂಖ್ಯೆಯ ಪ್ರವಾಸಿಗರು ಜೋಗಕ್ಕೆ ಆಗಮಿಸುತ್ತಿದ್ಧಾರೆ. ಅದರಲ್ಲಿಯೂ ರಜಾ ದಿನಗಳಂದು ಹಾಗೂ ವೀಕೆಂಡ್ ವೇಳೆ ಜನಸಾಗರವೇ ಹರಿದುಬರುತ್ತಿದೆ.

ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿರುವುದರಿಂದ, ಜಲಪಾತದ ಬಳಿ ಯಾವುದೇ ಗೊಂದಲ – ಗಡಿಬಿಡಿಗೆ ಆಸ್ಪದವಾಗದಂತೆ ಪ್ರವಾಸೋದ್ಯಮ ಇಲಾಖೆಯು ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಕಣ್ಮನ ಸೆಳೆಯುವ ವಾತಾವರಣ : ಜಲಪಾತದ ಬಳಿ ಆಗಾಗ್ಗೆ ಬೀಳುವ ಮಳೆ, ಮಂಜು ಮುಸುಕಿದ ವಾತಾವರಣ, ಹಚ್ಚ ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುವ ಜಲಧಾರೆಯ ಸೊಬಗು  ಪ್ರವಾಸಿಗರ ಮನಸೂರೆಗೊಳ್ಳುತ್ತಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →