What has the central government given to Karnataka? : CM Siddaramaiah Question ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು (mysore), ಜು. 29: ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ (cm siddaramaiah) ಪ್ರಶ್ನಿಸಿದರು. ಮೈಸೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (central finance minister nirmala sitharaman) ಅವರು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ (upper bhadra project) ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ (budget) ಈ ಬಗ್ಗೆ ಪ್ರಸ್ತಾಪವಿಲ್ಲ ಎಂದರು.

15 ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ 3000 ಕೋಟಿ ಕೊಡುವುದಾಗಿ ಹೇಳಿದ್ದರು.ಅದೂ ಇಲ್ಲ. 3000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ..?ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ  ಸುಳ್ಳು ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ (h d kumarswamy) ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು ಎಂದು ಹೇಳಿದ್ದಾರೆ.

ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ  ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ  ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ  ಮಂಜೂರು ಮಾಡಲು  ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ  ಸುಳ್ಳು ಹೇಳಿದ್ದಾರೆ ಎಂದರು. 

ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ  ವಾಲ್ಮೀಕಿ ಮತ್ತು ಮೂಡಾ ಹಗರಣದ ಬಗ್ಗೆ ಪ್ರತಿಭಟಿಸಿ  ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪಾದಯಾತ್ರೆ ಮಾಡಲಿ. ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು  ತನಿಖೆಯಾಗುತ್ತಿದೆ. ಸಿಬಿಐ, ಇಡಿ ಯವರೂ ಕೂಡ ತನಿಖೆ  ಮಾಡುತ್ತಿದ್ದಾರೆ ಎಂದರು.

ಉಪ ಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಬಿಜೆಪಿ ಅಯೋಗ್ಯ ಅಧಿಕಾರಿಗಳನ್ನು ಸರ್ಕಾರ ಏಕೆ ಇಟ್ಟುಕೊಂಡಿದೆ ಎಂದು ಹೇಳಿರುವ ಬಗ್ಗೆ ಮಾತನಾಡಿ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ.

ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ.ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐ ಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಯ ಚೋರ್ ಬಚಾವ್ ಸಂಸ್ಥೆ  ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು.  ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದರು.

ಮೂಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು. ಕೋವಿಡ್ 19 ಸಂದರ್ಭದಲ್ಲಿ  3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ.

ನ್ಯಾಯಾಂಗ ತನಿಖೆ ಅಥವಾ ಸಿಬಿಐ ಗೆ ವಹಿಸಲು ಕೊಡಿ ಎಂಡು ಒತ್ತಾಯಿಸಿದೆ. ಆದರೆ ಅವರು ಕೊಡಲಿಲ್ಲ ಎಂದರು. ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು. ಒಬ್ಬ ಸಚಿವರು, ಮುಖ್ಯಮಂತ್ರಿಯಾಗಿದ್ದವರು ಹೇಗೆ ಮಾತನಾಡಿದರೆ ಹೇಗೆ?  ನಮಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ ಎಂದರು.

An important decision to release water from Bhadra reservoir to the canals from today! ಭದ್ರಾ ಜಲಾಶಯದಿಂದ ನಾಲೆಗಳಿಗೆ ಜು. 29 ರಿಂದಲೇ ನೀರು ಹರಿಸಲು ಮಹತ್ವದ ನಿರ್ಧಾರ! Previous post ಭದ್ರಾ ಜಲಾಶಯದಿಂದ ನಾಲೆಗಳಿಗೆ ಇಂದಿನಿಂದಲೇ ನೀರು ಹರಿಸಲು ಮಹತ್ವದ ನಿರ್ಧಾರ!
Continued rain in different parts of Hosanagar taluk! ಹೊಸನಗರ ತಾಲೂಕಿನ ವಿವಿಧೆಡೆ ಮುಂದುವರಿದ ಮಳೆ ಆರ್ಭಟ! Next post ಹೊಸನಗರ ತಾಲೂಕಿನ ವಿವಿಧೆಡೆ ಮುಂದುವರಿದ ಮಳೆ ಆರ್ಭಟ!