ಹೊಸನಗರ ತಾಲೂಕಿನ ವಿವಿಧೆಡೆ ಮುಂದುವರಿದ ಮಳೆ ಆರ್ಭಟ!

Continued rain in different parts of Hosanagar taluk! ಹೊಸನಗರ ತಾಲೂಕಿನ ವಿವಿಧೆಡೆ ಮುಂದುವರಿದ ಮಳೆ ಆರ್ಭಟ!

ಹೊಸನಗರ (hosanagara), ಜು. 30: ಶಿವಮೊಗ್ಗ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಮುಂಗಾರು ಮಳೆಯ (monsoon rain) ತೀವ್ರತೆ ಕೊಂಚ ಇಳಿಕೆಯಾಗಿದೆ. ಆದರೆ ಪಶ್ಚಿಮಘಟ್ಟ (western ghat) ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆ ಮತ್ತೆ ಮಳೆ ಅಬ್ಬರ ಜೋರಾಗಿದೆ!

ಹೊಸನಗರ ತಾಲೂಕಿನ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ (heavy rainfall). ಜೂ. 30 ರ ಮಂಗಳವಾರ ಮುಂಜಾನೆಯಿಂದ ತಾಲೂಕಿನ ನಗರ ಹೋಬಳಿ (ngara) ಭಾಗದಲ್ಲಿ ಎಡೆಬಿಡದೆ ವರ್ಷಧಾರೆ ಸೃಷ್ಟಿಯಾಗಿದೆ. ಹಲವೆಡೆ ನೆರೆ (flood) ಭೀತಿ ಸೃಷ್ಟಿಯಾಗುವಂತೆ ಮಾಡಿದೆ!

ಸಂಡೋಡಿಯಲ್ಲಿ ಕಿರು ಸೇತುವೆ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳು ಜಲಾವೃತವಾಗುವಂತಾಗಿದೆ. ಭಾರೀ ಮಳೆಗೆ ಕೆರೆಕಟ್ಟೆ, ಹಳ್ಳಕೊಳ್ಳಗಳು ಮತ್ತೆ ಉಕ್ಕಿ ಹರಿಯುವಂತಾಗಿದೆ.

ಮಳೆ ವಿವರ : ಮಂಗಳವಾರ ಬೆಳಿಗ್ಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸನಗರ ತಾಲೂಕಿನ ಪ್ರಮುಖ ಸ್ಥಳಗಳಲ್ಲಿ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಮಾಣಿಯಲ್ಲಿ (mani) 185 ಮಿಲಿ ಮೀಟರ್, ಯಡೂರು (yadur) 217 ಮಿ.ಮೀ., ಹುಲಿಕಲ್ (hulikall) 210 ಮಿ.ಮೀ., ಮಾಸ್ತಿಕಟ್ಟೆ (masthikatte) 240 ಮಿ.ಮೀ., ಚಕ್ರಾ (chakra) 220 ಮಿ.ಮೀ., ಸಾವೇಹಕ್ಲುವಿನಲ್ಲಿ (savehakklu) 167 ಮಿ.ಮೀ. ಮಳೆಯಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →