
ಭಾರೀ ಮಳೆ, ಪ್ರವಾಹದಿಂದ ಭೂ ಕುಸಿತ : ಮಲೆನಾಡು, ಕರಾವಳಿಯಲ್ಲಿ ಕಟ್ಟೆಚ್ಚರವಹಿಸಲು ಡಿಸಿಗಳಿಗೆ ಸರ್ಕಾರದ ಸೂಚನೆ
ಬೆಂಗಳೂರು, ಜು. 30: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು (heavy rainfall) ಪ್ರವಾಹ (flood), ಭೂಕುಸಿತದಂತಹ (landslide) ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಅವರು ಸೂಚಿಸಿದ್ದಾರೆ.
ಮಂಗಳವಾರ ದೆಹಲಿ (delhi) ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಜಲಾಶಯಗಳ ನೀರಿನ ಮಟ್ಟದ (dams water level) ಕುರಿತು ನಿರಂತರ ಪರಿಶೀಲನೆ ನಡೆಸಿ, ಪ್ರವಾಹ ನಿಯಂತ್ರಣಕ್ಕೆ (flood control) ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಕರಾವಳಿ (costal) ಹಾಗೂ ಮಲೆನಾಡು (malnad) ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು (land slides) ವರದಿಯಾಗುತ್ತಿದ್ದು, ಈ ಕುರಿತು ಸಹ ಜಿಲ್ಲಾಧಿಕಾರಿಗಳು (deputy commissioners) ಎಚ್ಚರವಹಿಸುವಂತೆ ಸೂಚಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ. ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸಲಹೆ ನೀಡಿದ್ದಾರೆ.
ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ (control room) ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸುವಂತೆ ಆದೇಶಿಸಿದ್ದಾರೆ.