ಭದ್ರಾವತಿ ತಾಲೂಕಿನ ಶಾಲಾ – ಕಾಲೇಜ್ ಗಳಿಗೆ ಜು. 31 ರ ಬುಧವಾರ ರಜೆ ಘೋಷಣೆ

For the schools and colleges of Bhadravati Taluk Declaration of holiday on Wednesday july 31st ಭದ್ರಾವತಿ ತಾಲೂಕಿನ ಶಾಲಾ – ಕಾಲೇಜ್ ಗಳಿಗೆ ಜು 31 ರ ಬುಧವಾರ ರಜೆ ಘೋಷಣೆ

ಭದ್ರಾವತಿ (bhadravati), ಜು. 30: ಮಳೆ ಹಿನ್ನೆಲೆಯಲ್ಲಿ, ಜು. 31 ರ ಬುಧವಾರ ಭದ್ರಾವತಿ ತಾಲೂಕಿನ ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ (holiday announcement for schools and colleges) ಮಾಡಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ.

ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಜು. 31 ರಂದು ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ (holiday) ಮಾಡಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.

ಭಾರೀ ಮಳೆ (heavy rainfall) ಹಿನ್ನೆಲೆಯಲ್ಲಿ, ಈಗಾಗಲೇ ಜಿಲ್ಲೆಯ ತೀರ್ಥಹಳ್ಳಿ (thirthahalli), ಹೊಸನಗರ (hosanagara) ಹಾಗೂ ಸಾಗರ (sagar) ತಾಲೂಕುಗಳಲ್ಲಿ ಜು. 31 ರಂದು ರಜೆ ಘೋಷಣೆ ಮಾಡಲಾಗಿದೆ. ಇದೀಗ ಭದ್ರಾವತಿ ತಾಲೂಕಿನಲ್ಲಿಯೂ ರಜೆ ಘೋಷಿಸಲಾಗಿದೆ.

ವ್ಯಾಪಕ ಮಳೆ : ಜಿಲ್ಲೆಯಲ್ಲಿ ಕಡಿಮೆಯಾಗಿದ್ದ ಮುಂಗಾರು ಮಳೆಯ (monsoon rain) ತೀವ್ರತೆ ಮತ್ತೆ ಚುರುಕುಗೊಂಡಿದೆ. ಪಶ್ಚಿಮಘಟ್ಟ (western ghat) ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ವರ್ಷಧಾರೆಯಾಗುತ್ತಿದೆ (heavy to heavy rainfall). ಇದರಿಂದ ಕೆರೆಕಟ್ಟೆ, ನದಿಗಳು, ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →