ಎಸ್.ಎಲ್.ಎಲ್.ಸಿ – ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿವಮೊಗ್ಗ ಎನ್.ಎಸ್.ಯು.ಐ ಸಂಘಟನೆಯಿಂದ ಅಭಿನಂದನಾ ಸಮಾರಂಭ

Congratulatory function organized by Shimoga NSUI organization for students who scored highest marks in SLLC – PUC ಎಸ್.ಎಲ್.ಎಲ್.ಸಿ – ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿವಮೊಗ್ಗ ಎನ್.ಎಸ್.ಯು.ಐ ಸಂಘಟನೆಯಿಂದ ಅಭಿನಂದನಾ ಸಮಾರಂಭ

ಶಿವಮೊಗ್ಗ (shivamogga), ಜು. 31: ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. (nsui) ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ನಮ್ಮೂರ ಹೆಮ್ಮೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿರಾವ್ ತಿಳಿಸಿದ್ದಾರೆ.

ಈ ಕುರಿತಂತೆ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಎಸ್.ಎಸ್.ಎಲ್.ಸಿ. (sslc) ಹಾಗೂ ಪಿಯುಸಿಯಲ್ಲಿ (puc) ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು (students) ಅಭಿನಂದಿಸಲಾಗವುದು.

ಹಾಗೆಯೇ ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‌ಗಳಲ್ಲಿ ರ್ಯಾಂಕ್ ಗಳಿಸಿದ ಮತ್ತು ಯುಪಿಎಸ್ಸಿ-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದಿಸಲಾಗುವುದು ಎಂದು ತಿಳಿಸಿದ್ದಾರೆ.

ಆಗಸ್ಟ್ 03/08/2024 ರಂದು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರಲ್ಲಿ (shimoga kuvempu ranga mandhira) ಕಾರ್ಯಕ್ರಮ  ಏರ್ಪಡಿಸಲಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು, ಸಾಧಕರು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಲು ಅವರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9148928183 ಗೆ ಕರೆ ಮಾಡಿ ಹೆಸರು ನೊಂದಾಯಸುವಂತೆ ಚಂದ್ರೋಜಿರಾವ್ ಅವರು ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →