
ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗೆ ಭದ್ರಾ ಡ್ಯಾಂನಿಂದ ನೀರು : ವಾಣಿ ವಿಲಾಸ ಸಾಗರಕ್ಕೆ ಹರಿಯುತ್ತಿರುವ ಭದ್ರೆ!
ಶಿವಮೊಗ್ಗ (shivamogga), ಆ. 1: ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ವ್ಯಾಪ್ತಿಯಲ್ಲಿನ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗೆ (upper bhadra project) ಭದ್ರಾ ಜಲಾಶಯದಿಂದ ಜು. 31 ರಿಂದ ನೀರು ಹರಿಸಲಾಗುತ್ತಿದೆ.
ಸದರಿ ಕಾಲುವೆಯು ಭದ್ರಾ ಜಲಾಶದಿಂದ (bhadra dam) ಪ್ರಾರಂಭವಾಗಿ ಚಿಕ್ಕಮಗಳೂರು (chikkamagaluru) ಜಿಲ್ಲೆಯ ತರೀಕೆರೆ (tarikere) ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ (ajjampura) ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದೆ.
ಸರ್ಕಾರದ ನಿರ್ದೇಶನದಂತೆ ದಿ: 31-07-2024 ರಿಂದ ಶಾಂತಿಪುರ ಪಂಪ್‌ಹೌಸ್-1, ಜಂಭದಹಳ್ಳ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ ಪಂಪ್‌ಹೌಸ್-2, ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಬ್ಬೂರು ಗ್ರಾಮದ ಹತ್ತಿರವಿರುವ ವೈ-ಜಂಕ್ಷನ್‌ನಿಂದ
ಹೆಬ್ಬೂರು, ಕಾಟಿನಗೆರೆ, ಬೆಣಕುಣಸೆ, ಮುಗಳಿ, ಬೇಗೂರು, ಆಸಂದಿ, ಹಡಗಲು, ಕಲ್ಕೆರೆ, ಹೆಚ್.ತಿಮ್ಮಾಪುರ, ಕಲ್ಲಹಳ್ಳಿ, ಚಿಕ್ಕಬಳ್ಳೆಕೆರೆ, ಹನುಮನಹಳ್ಳಿ, ಚೌಳಹಿರಿಯೂರು ಮತ್ತು ಹಿ. ತಿಮ್ಮಾಮರ ಗ್ರಾಮಮಗಳ ಮಾರ್ಗವಾಗಿ ವೇದಾವತಿ ನದಿಗೆ (vedavathi river) ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ (vani vilasa sagara dam) ನೀರನ್ನು ಹರಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ (canal and ditch basin) ಸಾರ್ವಜನಿಕರು ತಿರುಗಾಡುವುದು, ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದು ನಿಷೇಧಿಸಲಾಗಿದೆ.
ಈ ಸೂಚನೆಗಳನ್ನು ಉಲ್ಲಂಘಿಸುವುದು, ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರಬಾಗಿದೆ.
ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸುಪರಿಂಟೆಂಡಿಂಗ್ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ (bhadra reservoir).