ಸಾಗರ ಎಆರ್‌ಟಿಓ ಕಚೇರಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ!

Sudden visit of Lokayukta police to Sagar ARTO office! ಸಾಗರ ಎಆರ್ಟಿಓ ಕಚೇರಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ

ಸಾಗರ (sagar), ಆ. 1: ಸಾಗರದ ಎ.ಆರ್.ಟಿ.ಓ ಕಚೇರಿಗೆ ಲೋಕಾಯುಕ್ತ ಪೊಲೀಸ್ ತಂಡ (lokayukta police team) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಜು. 31 ರಂದು ನಡೆದಿದೆ.

ಕಚೇರಿ ಸಿಬ್ಬಂದಿಗಳ ಹಾಜರಾತಿ ಪುಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ಗಳ, ಸಾರಥಿ ಮತ್ತು ವಾಹನ ತಂತ್ರಾಂಶವನ್ನು ಪರಿಶೀಲಿಸಿ ಎಲ್.ಎಲ್.ಆರ್., ಡಿ.ಎಲ್., ಎಫ್.ಸಿ.,

ಹೊಸ ವಾಹನಗಳ ನೊಂದಣಿ, ವಾಹನಗಳ ವರ್ಗಾವಣೆ, ದಂಡವ ಸೂಲಿ, ಡಿಜಿಟಲ್ ಕಾರ್ಡ್ ಪ್ರಿಂಟಿಂಗ್, ಆರ್.ಸಿ. ಕಾರ್ಡ್ ವಿತರಣೆ ಮತ್ತು ಸಕಾಲ ಯೋಜನೆಯಡಿಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಸಂಬಂಧಪಟ್ಟ ದಾಖಲಾತಿಗಳ ಪರಿಶೀಲನೆ ನಡೆಸಿದರು.

ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಎ.ಆರ್.ಟಿ.ಓ ವೀರೇಶ್.ಡಿ.ಹೆಚ್ ರವರಿಗೆ ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಲಾಗಿದ್ದು, ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಲೋಕಾಯುಕ್ತರು ಸೂಚನೆ ನೀಡಿದ್ದಾರೆ.

ಶಿವಮೊಗ್ಗ ಲೋಕಾಯುಕ್ತ ಅಧೀಕ್ಷಕ ಮಂಜುನಾಥ್ ಚೌದರಿ, ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳು ಭೇಟಿಯ ವೇಳೆ ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →