ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ

ಶಿವಮೊಗ್ಗ, ಮಾ. 2: ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕಾ ಕಾರ್ಯಕ್ರಮಗಳನ್ನು ಮಾರ್ಚ್ 04 ರಿಂದ ಆರು ತಿಂಗಳವರೆಗೆ, ಪ್ರತಿ ಭಾನುವಾರದಂದು ನಗರದ ರಾಜೀವ್‍ಗಾಂಧಿ ಬಡಾವಣೆಯಲ್ಲಿರುವ ಮಹಾವೀರ್ ಗೋಶಾಲೆಯ ಪಕ್ಕದಲ್ಲಿ ಆಯೋಜಿಸಿದೆ.

ಮಾನವೀಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ಶ್ವಾನಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು, ರೇಬಿಸ್, ಲೆಪ್ಟೋಸ್ಟೈರಾ ಇತ್ಯಾದಿ ಪ್ರಾಣಿ ಜನ್ಯ ರೋಗಗಳಿಂದ ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡುವುದು ಹಾಗೂ ಬೀದಿನಾಯಿಗಳಿಂದ ಸಾರ್ವಜನಿಕರಿಗಾಗುವ ತೊಂದರೆಗಳಿಂದ ಮುಕ್ತಗೊಳಿಸುವುದು ಈ ಶಸ್ತ್ರಚಿಕಿತ್ಸೆಯ ಉದ್ದೇಶವಾಗಿದೆ. ಬೀದಿನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿ ರೇಬಿಸ್ ವಿರುದ್ಧ ಲಸಿಕೆ ಹಾಕಿ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ಬಳಿಕ ಅವುಗಳನ್ನು ಹಿಡಿದ ಸ್ಥಳಗಳಲ್ಲಿ ಬಿಡಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಹೆಚ್ಚಿನ ಮಾಹಿತಿಗಾಗಿ ಡಾ|| ರೇಖಾ ಎಸ್.ಟಿ., ಪಶುವೈದ್ಯಾಧಿಕಾರಿಗಳು, ಮಹಾನಗರ ಪಾಲಿಕೆ- 9886326268 ಹಾಗೂ ಬಸವಪ್ರಸಾದ್ (ಎಸ್‍ಎಆರ್ ಸಿ) -9964289695 ರವರನ್ನು ಸಂಪರ್ಕಿಸಬಹುದಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *