ಮಲೆನಾಡಿನಲ್ಲಿ ಕಡಿಮೆಯಾದ ಮಳೆ ಅಬ್ಬರ : ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಂ ಒಳಹರಿವಿನಲ್ಲಿ ಇಳಿಕೆ!

Monsoon rains in Malnad: Increase in inflow to Tungಅ Bhadra and Linganamakki dams! ಮಲೆನಾಡಲ್ಲಿ ಮುಂಗಾರು ಮಳೆ : ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಂಗಳ ಒಳಹರಿವಿನಲ್ಲಿ ಹೆಚ್ಚಳ!

ಶಿವಮೊಗ್ಗ (shivamogga), ಆ. 4: ಜಿಲ್ಲೆಯಲ್ಲಿ ಮುಂಗಾರು ಮಳೆ (monsoon rain) ಅಬ್ಬರ ಕಡಿಮೆಯಾಗಿದೆ. ನದಿಗಳ (rivers) ನೀರಿನ ಹರಿವಿನಲ್ಲಿ ಇಳಿಕೆಯಾಗುತ್ತಿದೆ. ಇದರಿಂದ ಪ್ರಮುಖ ಜಲಾಶಯಗಳ (dams) ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡುಬಂದಿದೆ.

ಆಗಸ್ಟ್ 4 ರ ಭಾನುವಾರದ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯದ (linganamakki dam) ಒಳಹರಿವು 36,601 ಕ್ಯೂಸೆಕ್ ಗೆ ಇಳಿಕೆಯಾಗಿದೆ. ಇದರಿಂದ ಡ್ಯಾಂನಿಂದ ಹೊರಬಿಡುತ್ತಿರುವ (out flow) ನೀರಿನ ಪ್ರಮಾಣ 27,789 ಕ್ಯೂಸೆಕ್ ಗೆ ತಗ್ಗಿಸಲಾಗಿದೆ. ಜಲಾಶಯದ ನೀರಿನ ಮಟ್ಟ 1815. 60 (ಗರಿಷ್ಠ ಮಟ್ಟ : 1819) ವನ್ನು ಅಡಿಗೆ ಕಾಯ್ದುಕೊಳ್ಳಲಾಗಿದೆ.

ತುಂಗಾ ಜಲಾಶಯದ (tunga dam) ಒಳಹರಿವು (inflow)ಕೂಡ ಕಡಿಮೆಯಾಗಿದ್ದು, 35,957 ಕ್ಯೂಸೆಕ್ ಇದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ, ಅಷ್ಟೇ ಪ್ರಮಾಣದ ನೀರನ್ನು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ (tungabhadra reservoir) ಹೊರ ಬಿಡಲಾಗುತ್ತಿದೆ.

ಶಿವಮೊಗ್ಗ – ದಾವಣಗೆರೆ (shimoga – davanagere) ಜಿಲ್ಲೆಗಳ ರೈತರ ಜೀವನಾಡಿ ಎಂದೇ ಕರೆಯಲಾಗುವ, ಭದ್ರಾ ಜಲಾಶಯದ (bhadra dam) ಒಳಹರಿವು (inflow) 19,512 ಕ್ಯೂಸೆಕ್ ಗೆ ಇಳಿಕೆಯಾಗಿದೆ. ಆದರೆ  29,894 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ (outflow). ಜಲಾಶಯದ ನೀರಿನ ಮಟ್ಟವನ್ನು180 (ಗರಿಷ್ಠ ಮಟ್ಟ : 186) ಅಡಿಗೆ ಕಾಯ್ದುಕೊಳ್ಳಲಾಗಿದೆ.  

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →