Operation against illegal resorts and home stays built forest encroachment! ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್ ಹೋಂ ಸ್ಟೇ ವಿರುದ್ದ ಕಾರ್ಯಾಚರಣೆ

ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇ ವಿರುದ್ದ ಕಾರ್ಯಾಚರಣೆ!

ಬೆಂಗಳೂರು / ಶಿವಮೊಗ್ಗ, ಆ. 5: ರಾಜ್ಯದ ಪಶ್ಚಿಮಘಟ್ಟ ಅರಣ್ಯ ಪ್ರದೇಶ (western ghat forest) ವ್ಯಾಪ್ತಿಯ 10 ಜಿಲ್ಲೆಗಳಲ್ಲಿ, ಅರಣ್ಯ ಭೂಮಿ ಒತ್ತುವರಿ ಮಾಡಿ (forest land encroachment) ನಿರ್ಮಿಸಿರುವ ರೆಸಾರ್ಟ್, ಹೋಂ ಸ್ಟೇ ಸೇರಿದಂತೆ ಎಲ್ಲ ಮಾದರಿಯ ಅರಣ್ಯ ಒತ್ತುವರಿ ತೆರವುಗೊಳಿಸಲು ಆಗಸ್ಟ್ 5 ರ ಸೋಮವಾರದಿಂದ ಕಾರ್ಯಾಚರಣೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ (forest dept minister eshwar khandre) ಘೋಷಿಸಿದ್ದಾರೆ.

ಈ ಕುರಿತಂತೆ ಸಚಿವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮೊದಲು ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ (resort), ಹೋಂ ಸ್ಟೇ (home stay) ಇತರೆ ಕಟ್ಟಡ, ಜಮೀನುಗಳನ್ನು (agriculture land) ತೆರವುಗೊಳಿಸಲು ನಿರ್ಧರಿಸಲಾಗಿದೆ. ಪಶ್ಚಿಮಘಟ್ಟ (western ghat)  ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ವಾಣಿಜ್ಯ ಚಟುವಟಿಕೆ (commercial activities) ನಡೆಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಒತ್ತುವರಿ ತೆರವಿಗಾಗಿ (encroachment clearance) ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಲಾಗಿದೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ಅಸ್ತಿತ್ವಕ್ಕೆ ತರಲಾಗಿದೆ. ಪಶ್ಚಿಮಘಟ್ಟ ಅರಣ್ಯದಲ್ಲಿ 2015 ರ ನಂತರದ ಒತ್ತುವರಿಗೆ (encroachment) ಸಂಬಂಧಿಸಿದಂತೆ, ಕರ್ನಾಟಕ ಅರಣ್ಯ ಕಾಯ್ದೆ (karnataka forest act) ಸೆಕ್ಷನ್ 64 ಎ ಅಡಿ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಕೂಡಲೇ ತೆರವು ಕಾರ್ಯಾಚರಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ನಡುಕ : ಶಿವಮೊಗ್ಗ ಜಿಲ್ಲೆಯು (shimoga district) ಕೂಡ ಪಶ್ಚಿಮಘಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿದೆ. ಜಿಲ್ಲೆಯ ವಿವಿಧೆಡೆ ಅರಣ್ಯ ಪ್ರದೇಶಗಳಲ್ಲಿ (forest areas), ಕಳೆದೊಂದು ದಶಕದ ಅವಧಿಯಲ್ಲಿ ಭಾರೀ ದೊಡ್ಡ ಪ್ರಮಾಣದ ರೆಸಾರ್ಟ್, ಹೋಂ ಸ್ಟೇಗಳು ತಲೆಎತ್ತಿವೆ. ಈಗಾಗಲೇ ಅನಧಿಕೃತ ಕಟ್ಟಡಗಳನ್ನು ಅರಣ್ಯ ಇಲಾಖೆ ಗುರುತಿಸಿದೆ ಎನ್ನಲಾಗಿದೆ.

ಇದೀಗ ಸೋಮವಾರದಿಂದ  ಅನದಿಕೃತ ಒತ್ತುವರಿ ತೆರವು ಕಾರ್ಯಾಚರಣೆ (unscheduled encroachment clearance operation) ಆರಂಭಿಸಲು ರಾಜ್ಯ ಸರ್ಕಾರ ಅರಣ್ಯ ಇಲಾಖೆಗೆ ಖಡಕ್ ಆದೇಶ ನೀಡಿದೆ.  ಇದು ಸಹಜವಾಗಿಯೇ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿರುವವರಲ್ಲಿ ನಡುಕ ಹುಟ್ಟಿಸಿದೆ. ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಯಲಿದೆ ಎಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.

State Govt jobs are a golden opportunity for sportspersons ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೌಕರಿ ಸುರ್ವಣ ಅವಕಾಶ Previous post ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ..!
A young woman fell into a 60 feet deep ditch while taking a selfie! ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿ! Next post ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿ!